ಬಿಜೆಪಿ ಶಾಸಕ ಗೂಳಿ ಹಟ್ಟಿ ಶೇಖರ್ ಅಕ್ರಮದ ಬಗ್ಗೆ ನೀಡಿರುವ ದೂರು ಸುಳ್ಳೇ?- ಡಿ.ಕೆ ಶಿವಕುಮಾರ್ ಪ್ರಶ್ನೆ

ಬಿಜೆಪಿ ಶಾಸಕ ಗೂಳಿ ಹಟ್ಟಿ ಶೇಖರ್ ಅಕ್ರಮದ ಬಗ್ಗೆ ನೀಡಿರುವ ದೂರು ಸುಳ್ಳೇ?- ಡಿ.ಕೆ ಶಿವಕುಮಾರ್ ಪ್ರಶ್ನೆ

ಚಿತ್ರದುರ್ಗ: ಬಿಜೆಪಿಯ ದುರಾಡಳಿತದ ಬಗ್ಗೆ ನಾವು ಪಾಪದ ಪುರಾಣ ಬಿಡುಗಡೆ ಮಾಡಿದ್ದೇವೆ. ಈ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. 40% ಕಮಿಷನ್ ನಲ್ಲಿ ಸರ್ಕಾರ ಮುಳುಗಿದೆ. ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು 22 ಸಾವಿರ ಕೋಟಿಯಷ್ಟು ಅಕ್ರಮ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ.

ಅವರ ಮಾತು ಸುಳ್ಳಾಗಿದ್ದರೆ ಸರ್ಕಾರ ಯಾಕೆ ಯಾವುದೇ ಕ್ರಮ ಕೈಗೊಂಡಿಲ್ಲ. ಇನ್ನು ಗುತ್ತಿಗೆದಾರರ ಸಂಘದ ಅದ್ಯಕ್ಷ ಕೆಂಪಣ್ಣ ಅವರು ಈ ಸರ್ಕಾರದಲ್ಲಿ 40% ಕಮಿಷನ್ ಇಲ್ಲದೆ ಯಾವುದೇ ಕೆಲಸ ಆಗುವುದಿಲ್ಲ ಎಂದು ಪ್ರಧಾನಿಗೆ ಪತ್ರ ಬರೆದರು ಎಂಬುದಾಗಿ ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗುಡುಗಿದ್ದಾರೆ.

ಇಂದು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ನಡೆದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಈ ಕ್ಷೇತ್ರದ ಜನ ಕೃಷಿ ಆಧರಿಸಿ ಬದುಕುತ್ತಿದ್ದಾರೆ. ರೈತನಿಗೆ ಲಂಚ, ಪಿಂಚಣಿ, ನಿವೃತ್ತಿ ಯಾವುದೂ ಇಲ್ಲ. ಈ ರೈತರು ಮಳೆ, ಭೂಮಿ ಬೆಳೆ ಮೇಲೆ ಅವಲಂಬಿತವಾಗಿದ್ದಾರೆ. ಇವರ ರಕ್ಷಣೆ ಮಾಡಬೇಕಿದೆ ಎಂದರು.

ಈ ಭಾಗದಲ್ಲಿ ತೆಂಗು ಹಾಗೂ ಕೊಬ್ಬರಿ ಬೆಳೆಯುತ್ತಿದ್ದಾರೆ. ಹಿಂದೆ 20 ಸಾವಿರ ಇದ್ದ ಕೊಬ್ಬರಿ ಬೆಲೆ, ಈಗ 10,500 ಆಗಿದೆ. ಕೊಬ್ಬರಿ ಬೆಲೆ ಇಳಿದಿರುವಾಗ ರಸಗೊಬ್ಬರದ ಬೆಲೆ ಏನಾದರೂ ಕಡಿಮೆ ಆಗಿದೆಯಾ? ರೈತರು ಕೊಡುವ ಕೂಲಿ ಕಡಿಮೆ ಆಗಿದೆಯಾ? ಇಲ್ಲ. ಕೃಷಿಗೆ ತಗಲುವ ವೆಚ್ಚ ಹೆಚ್ಚಾಗಿದೆಯೇ ಹೊರತು, ಬೆಳೆಗೆ ಸಿಗುವ ಬೆಲೆ ಮಾತ್ರ ಕಡಿಮೆಯಾಗುತ್ತಿದೆ ಎಂದು ತಿಳಿಸಿದರು.

ಮೋದಿ ಅವರು ರೈತರ ಆದಾಯ ಡಬಲ್ ಮಾಡುತ್ತೇವೆ ಎಂದಿದ್ದರು. ಮಾಡಿದರಾ? ಇಲ್ಲ. ನಮ್ಮ ಕಾಲದಲ್ಲಿ ಸೋನಿಯಾ ಗಾಂಧಿ ಅವರು ಯುಪಿಎ ಅಧ್ಯಕ್ಷರಾಗಿ, ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಉದ್ಯೋಗ ಖಾತ್ರಿ ಯೋಜನೆಯಡಿ ಕನಿಷ್ಠ ವೇತನ ನಿಗದಿಗೊಳಿಸಿ ವರ್ಷದಲ್ಲಿ 100 ದಿನ ಕೆಲಸ ಸಿಗುವಂತೆ ಮಾಡಿದರು ಎಂದರು.

ಜೆ.ಹೆಚ್. ಪಟೇಲರು ಸಿಎಂ ಆಗಿದ್ದ ಸಮಯದಲ್ಲಿ ಪ್ರತಿ ಪಂಚಾಯ್ತಿಗೆ 1 ಲಕ್ಷ ಅನುದಾನ ನೀಡುತ್ತಿದ್ದರು. ಕೃಷ್ಣ ಅವರ ಕಾಲದಲ್ಲಿ 25-30 ಲಕ್ಷ ಬರುವಂತೆ ಮಾಡಿದರು. ಯುಪಿಎ ಸರ್ಕಾರ ಕೊಟ್ಟ ನರೇಗಾ ಕಾರ್ಯಕ್ರಮದ ಮೂಲಕ ಪ್ರತಿ ಪಂಚಾಯ್ತಿಗೆ 2-5 ಕೋಟಿಯಷ್ಟು ಕೆಲಸ ಸಿಗುತ್ತಿದೆ. ಹೀಗೆ ಕಾಂಗ್ರೆಸ್ ಪಕ್ಷ ರೈತರು ಹಾಗೂ ಕಾರ್ಮಿಕರ ಬದುಕು ಸುಧಾರಣೆಗೆ ನೆರವಾಗಿದೆ. ನನ್ನ ಕ್ಷೇತ್ರದಲ್ಲಿ ಈ ಯೋಜನೆ ಮೂಲಕ 40 ಸಾವಿರ ರೈತರಿಗೆ ದನದ ಕೊಟ್ಟಿಗೆ ನಿರ್ಮಾಣ ಮಾಡಿಕೊಟ್ಟಿದ್ದೇವೆ ಎಂದು ಹೇಳಿದರು.

ಈ ಭಾಗದ ರೈತರು ರಾಗಿ ಬೆಳೆ ಬೆಳೆಯುತ್ತಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ರೈತರಿಂದ 50 ಕ್ವಿಟಾಂಲ್ ರಾಗಿಯನ್ನು ಬೆಂಬಲ ಬೆಲೆಗೆ ಖರೀದಿಸುತ್ತಿದ್ದೆವು, ಈ ಸರ್ಕಾರ ಈಗ ಕೇವಲ 20 ಕ್ವಿಂಟಾಲ್ ಮಾತ್ರ ರಾಗಿ ಖರೀದಿ ಮಾಡುತ್ತಿದೆ. ಬೆಂಬಲ ಬೆಲೆ ನೀಡುತ್ತೇವೆ ಎಂದ ಬಿಜೆಪಿ ಸರ್ಕಾರ ಯಾವುದೇ ನೆರವು ನೀಡುತ್ತಿಲ್ಲ. ಕೋವಿಡ್ ಸಮಯದಲ್ಲೂ ಅವರು ಸಹಾಯಕ್ಕೆ ಬರಲಿಲ್ಲ ಎಂದರು.

ಬಿಜೆಪಿ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳ ಬಗ್ಗೆ ಸರಕಾರಕ್ಕೆ ದಿನನಿತ್ಯ ಪ್ರಶ್ನೆ ಕೇಳುತ್ತಿದ್ದು, ಇದುವರೆಗೂ ನೂರೈವತ್ತಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಿದ್ದೇವೆ. ಈವರೆಗೂ ಒಂದೇ ಒಂದು ಉತ್ತರ ನೀಡಿಲ್ಲ. ಅಧಿಕಾರಕ್ಕೆ ಬಂದರೆ ಸಹಕಾರಿ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ 1 ಲಕ್ಷವರೆಗೂ ಸಾಲ ಮನ್ನಾ ಮಾಡುತ್ತೇವೆ ಎಂದು ಹೇಳಿದರು, ಮಾಡಿದರಾ? ಇವರು