ಬಿಜೆಪಿ ಶಾಸಕನ ಪುತ್ರನನ್ನು ಕೂಡಲೇ ಬಂದಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಬಿಜೆಪಿ ಶಾಸಕನ ಪುತ್ರ ಲಂಚ ಸ್ವೀಕರಿಸುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವ ಹಿನ್ನಲೆ ಶಾಸಕರ ಪುತ್ರನನ್ನು ಈ ಕೂಡಲೇ ಬಂದಿಸಬೇಕು ಎಂದು ಕಲಬುರಗಿ ನಗರದಲ್ಲಿಂದು ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ನಗರದ ಕಾಂಗ್ರೆಸ್ ಕಛೇರಿಯಿಂದ ಜಿಲ್ಲಾ ಪಂಚಾಯತ್ ಕಛೆರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿದರು. 40 ಪರ್ಸೆಂಟ್ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದೆ. ಅಲ್ಲದೇ ಬಿಜೆಪಿ ಶಾಸಕರ ಪುತ್ರ ಸಂತೋಷ ಮಾಡಾಳ ಲಂಚ್ ಸ್ವೀಕರಿಸುವಾಗಲೇ ಸಿಕ್ಕಿಬಿದ್ದಿದ್ದಾನೆ. ಹೀಗಾಗಿ ಆರೋಪಿಯನ್ನ ಶೀಘ್ರವೇ ಬಂಧಿಸಬೇಕು ಎಂದು ಆಗ್ರಹಿಸಿದರು. 

ಇನ್ನು ಪ್ರತಿಭಟನೆಯಲ್ಲಿ ಶಾಸಕಿ ಖನಿಜ ಫಾತಿಮಾ, ಮಾಜಿ ಸಚಿವ ಶರಣ ಪ್ರಕಾಶ ಪಾಟೀಲ್ , ಜಿಲ್ಲಾ ಅಧ್ಯಕ್ಷ ಜಗದೇವ ಗುತ್ತೇದಾರ ಸೇರಿದಂತೆ ಹಲವು ಕಾರ್ಯಕರ್ತರು ಪಾಲ್ಗೊಂಡಿದ್ದರು.