ಬಿಜೆಪಿ ಸರ್ಕಾರ ಅಂತ್ಯೋದಯದ ಪರಿಕಲ್ಪನೆಯನ್ನು ಹೊಂದಿದೆ: ನಳಿನ್ ಕುಮಾರ್ ಕಟೀಲ್
ಕಲಬುರಗಿ: ಇಂದು ಕಲಬುರಗಿ ಮತ್ತ ಯಾದಗಿರಿ ಜಿಲ್ಲೆಗೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ. ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಮೋದಿ ಚಾಲನೆ ನೀಡಲಿದ್ದಾರೆ.
ಈ ಕುರಿತು ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.
ನಗರದಲ್ಲಿ ಮತನಾಡಿದ ಅವರು, ಕಾಂಗ್ರೆಸ್ ಸುದೀರ್ಘ ಆಡಳಿತ ನಡೆಸಿದೆ. ಆದ್ರೆ ಅಭಿವೃದ್ಧಿ ಮಾಡಿಲ್ಲ.75 ವರ್ಷಗಳ ಆಡಳಿತದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಹೀಗಾಗಿ ಡಬಲ್ ಇಂಜಿನ್ ಸರ್ಕಾರ ಆಡಳಿತ ನಡೆಸುತ್ತಿದೆ. ಖರ್ಗೆ ಟಾರ್ಗೆಟ್ ಮಾಡುವ ಉದ್ದೇಶ ಪ್ರಧಾನಿ ನರೇಂದ್ರ ಮೋದಿಗಿಲ್ಲ. ಅಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಮೋದಿ ಬರುತ್ತಿದ್ದಾರೆ ಎಂದು ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.