ಬಿಜೆಪಿ ಸೇರ್ಪಡೆ ಕಾರ್ಯಕ್ರಮ: ದೂರ ಉಳಿದ ಅನಂತನಾಗ್

ಬೆಂಗಳೂರು: ಚಿತ್ರನಟ ಅನಂತನಾಗ್ ಪಕ್ಷಕ್ಕೆ ಸೇರ್ಪಡೆ ವಿಚಾರದಲ್ಲಿ ಕುತೂಹಲ ಸೃಷ್ಟಿಸಿದ್ದು, ಬುಧವಾರ ನಡೆದ ಸೇರ್ಪಡೆ ಕಾರ್ಯಕ್ರಮದಿಂದ ಅವರು ದೂರ ಉಳಿದಿರುವುದು ಚರ್ಚೆಗೆ ಕಾರಣವಾಗಿದೆ.ಕಾಂಗ್ರೆಸ್ ಮುಖಂಡರಾದ ಸಪ್ತಗಿರಿ ಶಂಕರ್ ನಾಯಕ್, ವೀರಶೈವ ಮಹಾಸಭಾದ ಪ್ರಧಾನ ಕಾರ್ಯದರ್ಶಿ ರೇಣುಕಾ ಪ್ರಸಾದ್, ಜೆಡಿಎಸ್ ರಾಜ್ಯ ಕಾರ್ಯದರ್ಶಿ ಬೂದಿಹಾಳ್ ಹನುಮಂತರಾಜು, ಕಾಂಗ್ರೆಸ್ ರಾಜ್ಯ ಕಾರ್ಯಕಾರಿಣಿ ಸದಸ್ಯ ತುಳಸಿ ರಾಮ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಉಪಾಧ್ಯಕ್ಷ ನಿರ್ಮಲ್ ಕುಮಾರ ಸುರಾನ, ಸಂಘಟನ ಕಾರ್ಯದರ್ಶಿ ಜಿ.ವಿ. ರಾಜೇಶ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.ಈ ಕಾರ್ಯಕ್ರಮದಲ್ಲಿ ಚಿತ್ರನಟ ಅನಂತನಾಗ್ ಕೂಡ ಸೇರ್ಪಡೆಯಾಗುತ್ತಾರೆಂಬ ವದಂತಿ ಹರಡಿತ್ತು. ಆದರೆ ಅವರು ಕಾರ್ಯಕ್ರಮಕ್ಕೆ ಆಗಮಿಸಲಿಲ್ಲ. ರಾಷ್ಟ್ರೀಯ ನಾಯಕರ ಸಮ್ಮುಖದಲ್ಲಿ ಅವರು ಸೇರ್ಪಡೆಯಾಗುತ್ತಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.