ಬಿಜೆಪಿಯಿಂದ ಮುಲ್ಲಾಗಳಿಗೆ ಅವಮಾನ; ಸಿದ್ದರಾಮಯ್ಯ ಬೆಂಬಲಿಸಿದ ಮುಸ್ಲಿಂ ಸಂಘಟನೆ
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ & ಸಚಿವ ಅಶ್ವತ್ಥ್ ನಾರಾಯಣ್ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂದು ವ್ಯಂಗ್ಯವಾಡಿರುವುದು ದೊಡ್ಡಮಟ್ಟದ ಚರ್ಚೆಗೆ ಕಾರಣವಾಗಿದೆ. ಈ ಬೆನ್ನಲ್ಲೇ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿರುವ ಮುಸ್ಲಿಂ ಸಂಘಟನೆ, ಸಿ.ಟಿ ರವಿ & ಅಶ್ವತ್ಥ್ ನಾರಾಯಣ್ ಕ್ಷಮೆ ಕೋರುವಂತೆ ಒತ್ತಾಯಿಸಿದೆ. ಸಿ.ಟಿ ರವಿ ಅಶ್ವಥ್ ನಾರಾಯಣ್ ಬಹಿರಂಗವಾಗಿ ಕ್ಷಮೆ ಕೇಳದೇ ಇದ್ದರೆ ಕೋರ್ಟ್ ಮೆಟ್ಟಿಲೇರುವುದಾಗಿ ಎಚ್ಚರಿಕೆ ನೀಡಿದೆ.