ಬಿಜೆಪಿಯೇ ಭರವಸೆ ಎನ್ನುತ್ತಿರುವ ಆಡಳಿತ ಪಕ್ಷ: 40 ಪರ್ಸೆಂಟ್ ಕಮಿಷನ್ ಭ್ರಷ್ಟಾಚಾರ ಪಕ್ಷ ಎಂದು ಮಸಿ ಬಳಿಯುತ್ತಿರುವ ಕಾಂಗ್ರೆಸ್

ಬಿಜೆಪಿಯೇ ಭರವಸೆ ಎನ್ನುತ್ತಿರುವ ಆಡಳಿತ ಪಕ್ಷ: 40 ಪರ್ಸೆಂಟ್ ಕಮಿಷನ್ ಭ್ರಷ್ಟಾಚಾರ ಪಕ್ಷ ಎಂದು ಮಸಿ ಬಳಿಯುತ್ತಿರುವ ಕಾಂಗ್ರೆಸ್
ವಿಧಾನಸಭೆ ಚುನಾವಣೆ ಸನ್ನಿಹಿತವಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಮತದಾರರನ್ನು ಓಲೈಸಲು ತಮ್ಮದೇ ರೀತಿಯಲ್ಲಿ ತಂತ್ರ-ಪ್ರತಿತಂತ್ರ ಹೆಣೆಯುತ್ತವೆ, ಬೆಂಗಳೂರಿನ ಬೀದಿ ಬೀದಿಗಳಲ್ಲಿ, ರಸ್ತೆಗಳ ಇಕ್ಕೆಲಗಳಲ್ಲಿ ಗೋಡೆಗಳಲ್ಲಿ ಜಾಹೀರಾತುಗಳನ್ನು ಪ್ರಕಟಿಸಲಾಗುತ್ತಿದೆ. ಬೆಂಗಳೂರು:ವಿಧಾನಸಭೆ ಚುನಾವಣೆ ಸನ್ನಿಹಿತವಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಮತದಾರರನ್ನು ಓಲೈಸಲು ತಮ್ಮದೇ ರೀತಿಯಲ್ಲಿ ತಂತ್ರ-ಪ್ರತಿತಂತ್ರ ಹೆಣೆಯುತ್ತವೆ, ಬೆಂಗಳೂರಿನ ಬೀದಿ ಬೀದಿಗಳಲ್ಲಿ, ರಸ್ತೆಗಳ ಇಕ್ಕೆಲಗಳಲ್ಲಿ ಗೋಡೆಗಳಲ್ಲಿ ಜಾಹೀರಾತುಗಳನ್ನು ಪ್ರಕಟಿಸಲಾಗುತ್ತಿದೆ.
ಬೆಂಗಳೂರಿನ ಅನೇಕ ಕಡೆ ಬಿಜೆಪಿಯೇ ಭರವಸೆ ಎಂಬ ಶೀರ್ಷಿಕೆ ಹಾಕಿ ಅದರಡಿಯಲ್ಲಿ ಬೊಮ್ಮಾಯಿ ಸರ್ಕಾರದ ಯೋಜನೆಗಳು, ಕೆಲಸಗಳ ಬಗ್ಗೆ ಜಾಹೀರಾತು, ಕೇಂದ್ರ ಮತ್ತು ರಾಜ್ಯ ನಾಯಕರ ಫೋಟೋಗಳನ್ನು ಮುದ್ರಿಸಲಾಗಿದೆ. ಸರ್ಕಾರದ ಸಾಧನೆಗಳನ್ನು ಜನರಿಗೆ ತೋರಿಸುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. ಈ ಪೋಸ್ಟರ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಶೇಕಡಾ 40 ಕಮಿಷನ್/ಭ್ರಷ್ಟಾಚಾರ ಸರ್ಕಾರ ಎಂದು ಕಪ್ಪು ಬಣ್ಣದ ಶಾಯಿಯಲ್ಲಿ ಬರೆಯುತ್ತಿದ್ದಾರೆ. ಬೆಂಗಳೂರಿನಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಯ ಪೋಸ್ಟರ್ ಮೇಲೆ ಮಸಿ ಬಳೆಯುವ ಕೆಲಸ ಮಾಡುತ್ತಿದೆ.