ಬಿಟ್ ಕಾಯಿನ್ ಪ್ರಕರಣ ಸಿಎಂ ಬಲಿ ಪಡೆಯುತ್ತೆ : ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ : ಬಿಟ್ ಕಾಯಿನ್ ಪ್ರಕರಣ ಸಿಎಂ ಬಲಿ ಪಡೆಯುತ್ತೆ : ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ

ಬಿಟ್ ಕಾಯಿನ್ ಪ್ರಕರಣ ಸಿಎಂ ಬಲಿ ಪಡೆಯುತ್ತೆ : ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ : ಬಿಟ್ ಕಾಯಿನ್ ಪ್ರಕರಣ ಸಿಎಂ ಬಲಿ ಪಡೆಯುತ್ತೆ : ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ

ಕಲಬುರಗಿ : ರಾಜ್ಯದಲ್ಲಿ ಬಿಟ್ ಕಾಯಿನ್ ಪ್ರಕರಣ ಸಿಎಂ ಬಲಿ ಪಡೆಯುತ್ತದೆ. ಈ ಬಾರಿಯೂ ಬಿಜೆಪಿಯಲ್ಲಿ 3 ಸಿಎಂಗಳು ಆಗುತ್ತಾರೆ. ಬಿಟ್ ಕಾಯಿನ್ ದಂಧೆಯಲ್ಲಿ ಬಿಜೆಪಿಯವರಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಾಂಜಾ ಸಾಗಾಟ ಪಡಿತರ ಹಂಚಿಕೆಗಿಂತ ಸುಲಭವಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಗಾಂಜಾ ಸುಲಭವಾಗಿ ಸಿಗುತ್ತಿದೆ.ಬಾರ್ ಗಳಿಂದ ಬಾರ್ಗಳಿಂದ 5 ಸಾವಿರ ಹಫ್ತಾ ವಸೂಲಿ ಮಾಡುತ್ತಾರೆ. ಬಿಜೆಪಿ ಸೇರಿದರೆ ರೌಡಿಶೀಟರ್ ಪಟ್ಟಿಯಲ್ಲಿ ಹೆಸರು ಇರಲ್ಲ. ರೌಡಿಶೀಟರ್ ಪಟ್ಟಿಯಿಂದ ಹೆಸರನ್ನು ಕೈಬಿಡಲಾಗುತ್ತದೆ ಎಂದು ಹೇಳಿದ್ದಾರೆ.

ಹ್ಯಾಕರ್ ಶ್ರೀಕಿಯಿಂದ ಜಪ್ತಿ ಮಾಡಿದ ಬಿಟ್‌ ಕಾಯಿನ್ ಎಲ್ಲಿ? 35 ಬಿಟ್ ಕಾಯಿನ್‌ಗಳನ್ನು ಜಪ್ತಿ ಮಾಡಿದ್ದಾಗಿ ಹೇಳಿದ್ದಾರೆ. ಈ ಹಗರಣದ ಪಾರದರ್ಶಕ ತನಿಖೆಯಾದರೆ ರಾಜ್ಯದಲ್ಲಿ ಮತ್ತೆ ಬಿಜೆಪಿಯ 3ನೇ ಮುಖ್ಯಮಂತ್ರಿ ನೋಡುತ್ತೇವೆ. ಇದರಲ್ಲಿ ಯಾರು ಇದ್ದಾರೆಂದು ತನಿಖಾಧಿಕಾರಿಗಳಿಗೆ ಗೊತ್ತಿದೆ. ಸರಿಯಾದ ತನಿಖಾ ಏಜೆನ್ಸಿಗೆ ನೀಡಿದರೆ ಪ್ರಕರಣ ಬಯಲಾಗುತ್ತೆ ಎಂದರು.