ಸತ್ಯ ಮುಚ್ಚಿಡಲು ಸಾಧ್ಯವಿಲ್ಲ' : 'ಬಿಬಿಸಿ' ಸರಣಿಗೆ ನಿಷೇಧ ಹೇರಿದ್ದಕ್ಕೆ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ಕುರಿತ ಬಿಬಿಸಿ ಸಾಕ್ಷ್ಯಚಿತ್ರವನ್ನು ಭಾರತ ನಿಷೇಧಿಸಿದೆ. ಆದರೆ ಸತ್ಯವನ್ನು ಮರೆಮಾಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಪಿಎಂ ಕುರಿತು ಬಿಬಿಸಿ ಸರಣಿಯನ್ನು ಭಾರತ ಸರ್ಕಾರವು ನಿಷೇಧಿಸಿದೆ.
ಸತ್ಯವನ್ನು ಮುಚ್ಚಿಡಲು ಸಾಧ್ಯವಿಲ್ಲ. ಸತ್ಯ ಹೊಳೆಯುತ್ತದೆ. ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರ. ಸತ್ಯವನ್ನು ಎಷ್ಟೇ ಮರೆಮಾಚಿದರೂ ಜಯಭೇರಿ ಬಾರಿಸುತ್ತದೆ ಎಂದು ಪ್ರತಿಪಾದಿಸಿದ್ದಾರೆ.
ಜ.21 ರಶನಿವಾರ, ಸರಣಿಯನ್ನು ಪೋಸ್ಟ್ ಮಾಡಿದ ಯೂಟ್ಯೂಬ್ ಚಾನೆಲ್‌ಗಳು ಮತ್ತು ಟ್ವಿಟರ್ ಖಾತೆಗಳನ್ನು ನಿರ್ಬಂಧಿಸಲು ಕೇಂದ್ರ ಆದೇಶಿಸಿದೆ.
ಗುಜರಾತ್ 2002ರ ಗಲಭೆಗಳು ಮತ್ತು ಪ್ರಧಾನಿ ಮೋದಿ ಕುರಿತು ಬಿಬಿಸಿಯು 'ಇಂಡಿಯಾ: ಮೋದಿ ಪ್ರಶ್ನೆ' ಎಂಬೆಸರಿನಲ್ಲಿ ಸಾಕ್ಷ್ಯಚಿತ್ರ ತಯಾರಿದೆ. ಇದರಲ್ಲಿ ಮೋದಿಯವನ್ನು ಅಪಮಾನಿಸಲಾಗಿದೆ ಎಂದೇಳಿ ಕೇಂದ್ರ ಸರ್ಕಾರ ಸಾಕ್ಷ್ಯಚಿತ್ರವನ್ನು ಹಂಚಿಕೊಳ್ಳುವ ಯೂಟ್ಯೂಬ್ ಮತ್ತು ಟ್ವೀಟ್‌ಗಳ ಮೇಲೆ ನಿರ್ಬಂಧ ಹೇರಿದೆ.
ಇನ್ನು ಸಾಕ್ಷ್ಯಚಿತ್ರವನ್ನು ನಿರ್ಬಂಧಿಸಿಕ್ಕಾಗಿ ಕೇಂದ್ರದ ವಿರುದ್ಧ ಪ್ರತಿಪಕ್ಷಗಳು ತೀವ್ರ ಖಂಡನೆ ವ್ಯಕ್ತಪಡಿಸಿವೆ.