ಬಿಯಾಂಡ್ ಬೆಂಗಳೂರು ಶಾಲೆಗಳಲ್ಲಿ ಸಂಶೋಧನೆ ಹಾಗೂ ನವೋದ್ಯಮಕ್ಕೆ ಭದ್ರ ಬುನಾದಿ

ಬಿಯಾಂಡ್ ಬೆಂಗಳೂರು ಶಾಲೆಗಳಲ್ಲಿ ಸಂಶೋಧನೆ ಹಾಗೂ ನವೋದ್ಯಮಕ್ಕೆ ಭದ್ರ ಬುನಾದಿ

 ಬಿಯಾಂಡ್ ಬೆಂಗಳೂರು’ ಯೋಜನೆಯಡಿ ರಾಜ್ಯದ  ಜಿಲ್ಲೆಗಳಲ್ಲಿ ನವೋದ್ಯಮ, ಐಟಿ ಬಿಟಿ, ಸ್ಟಾರ್ಟ್ ಅಪ್ ಗಳನ್ನು ಪ್ರಾರಂಭಿಸುವ ಚಿಂತನೆಯಿದೆ. ರಾಜ್ಯದಲ್ಲಿ ನೂತನ ಆರ್ ಎಂಡ್ ಡಿ ನೀತಿಯನ್ನು ಪ್ರಾರಂಭಿಸಿ, ಸಣ್ಣ ಮಟ್ಟದ ಗ್ಯಾರೇಜಿನಿಂದ ಹಿಡಿದು ದೊಡ್ಡ ಕೈಗಾರಿಕೆವರೆಗೂ ವೈಜ್ಞಾನಿಕ ಸಂಶೋಧನೆಗೆ ಸಹಕಾರ ನೀಡಲಾಗುವುದು ಎಂದು ಸಿ. ಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ಶಾಲೆಗಳಲ್ಲಿ ವೈಜ್ಞಾನಿಕ ಚಿಂತನೆ, ಉದ್ಯಮಶೀಲತೆಗೆ ಉತ್ತೇಜನ ನೀಡಲು ಶಾಲೆಗಳ ಪಠ್ಯಪುಸ್ತಕದಲ್ಲಿ ಈ ವಿಷಯಗಳನ್ನು ಸೇರಿಸಲು ತೀರ್ಮಾನಿಸಲಾಗಿದೆ. 150 ಐಟಿಐಗಳನ್ನು ಉನ್ನತೀಕರಿಸಲಾಗಿದೆ. ಡಿಪ್ಲೊಮಾ ಕಾಲೇಜುಗಳನ್ನು ಉನ್ನತೀಕರಿಸಲು ಯೋಜಿಸಲಾಗಿದೆ. ಶಾಲೆ ಕಾಲೇಜುಗಳಲ್ಲಿ ವೈಜ್ಞಾನಿಕ ಚಿಂತನೆ ಸಂಶೋಧನೆ ಹಾಗೂ ನವೋದ್ಯಮಕ್ಕೆ ಭದ್ರ ಬುನಾದಿ ಹಾಕುವ ಮಹಾತ್ವಾಕಾಂಕ್ಷೆಯ ಯೋಜನೆಯನ್ನು ಸರ್ಕಾರ ತರಲಿದೆ ಎಂದು ತಿಳಿಸಿದರು.ಬೆಂಗಳೂರು ನಗರದಲ್ಲಿ 180 ಕ್ಕೂ ಹೆಚ್ಚು ವಿವಿಧ ಕ್ಷೇತ್ರಗಳಲ್ಲಿ ಸಂಶೋಧನಾ ಕೇಂದ್ರಗಳಿವೆ. ಕೃಷಿ, ತೋಟಗಾರಿಕೆ, ರೇಷ್ಮೆ ಉದ್ಯಮ, ಹೆಚ್ಚು ಉದ್ಯೋಗ ಸೃಜಿಸುವಂತಹ ಕ್ಷೇತ್ರಗಳ್ಲಲಿ ಸ್ಟಾರ್ಟ್ ಅಪ್ ಗಳು ಬರಬೇಕೆನ್ನುವ ಚಿಂತನೆ ಸರ್ಕಾರ ಹೊಂದಿದೆ. ಸಾಮಾಜಿಕ ಜವಾಬ್ದದಾರಿಯಿಂದ ಶಿಕ್ಷಣ, ಆರೋಗ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಕ್ಷೇತ್ರಗಳಲ್ಲಿ ಸ್ಟಾರ್ಟ್ ಅಪ್ ಗಳು ಹೆಚ್ಚು ಬರಬೇಕೆನ್ನುವ ಆಶಯ ವ್ಯಕ್ತಪಡಿಸಿದರು.ಉತ್ತಮ ತಂತ್ರಾಂಶ, ತಂತ್ರಜ್ಞಾನ ಹಾಗೂ ವೈಜ್ಞಾನಿಕತೆಯಿಂದ ಪ್ರಧಾನಿಯವರ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಕನಸನ್ನು ಸಾಕಾರಗೊಳಿಸುವಲ್ಲಿ ಕರ್ನಾಟಕ ಮಹತ್ವದ ಪಾತ್ರ ವಹಿಸಲಿದೆ. ನವ ಭಾರತ, ನವ ಆರ್ಥಿಕತೆಯ ಭಾರತದಲ್ಲಿ ನವ ಕರ್ನಾಟಕದ ಸ್ಟಾರ್ಟ್ ಅಪ್ ಗಳ ಮೂಲಕ ಮಹತ್ತರ ಕೊಡುಗೆ ನೀಡಲಿದೆ. ಯುವಕರಿಗೆ ವೈಜ್ಞಾನಿಕ ಚಿಂತನೆಯಿಂದ ಹೊಸ ಸವಾಲುಗಳನ್ನು ಎದುರಿಸಲು ಪ್ರೋತ್ಸಾಹ ನೀಡುತ್ತಿರುವ ಪ್ರಧಾನ ಮಂತ್ರಿಗಳಿಗೆ ಅಭಿನಂಧಿಸಿದರು.
9ಲೈವ್ ಬೆಂಗಳೂರು