ಬಿಹಾರದ ಮಾಜಿ ಸಿಎಂ ʻರಾಬ್ರಿ ದೇವಿʼ ನಿವಾಸದ ಮೇಲೆ ಸಿಬಿಐ ದಾಳಿ

ಬಿಹಾರ: ಬಿಹಾರದ ಮಾಜಿ ಸಿಎಂ ರಾಬ್ರಿ ದೇವಿ(Rabri Devi) ಅವರ ಪಾಟ್ನಾ ನಿವಾಸದ ಮೇಲೆ ಸಿಬಿಐ ಇಂದು ದಾಳಿ ನಡೆಸಿದೆ.
ಲ್ಯಾಂಡ್ ಫಾರ್ ಜಾಬ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತಂಡವು ಇಂದು ರಾಬ್ರಿ ದೇವಿ ನಿವಾಸದ ಮೇಲೆ ದಾಳಿ ನಡೆಸಿದೆ.
ಈ ಪ್ರಕರಣದಲ್ಲಿ ಸಿಬಿಐ ಈಗಾಗಲೇ ಆರೋಪಪಟ್ಟಿ ಸಲ್ಲಿಸಿದ್ದು, ವಿಶೇಷ ನ್ಯಾಯಾಲಯವು ಮಾಜಿ ರೈಲ್ವೇ ಸಚಿವ ಲಾಲು ಪ್ರಸಾದ್ ಮತ್ತು ಅವರ ಕುಟುಂಬ ಸದಸ್ಯರು ಸೇರಿದಂತೆ ಆರೋಪಿಗಳಿಗೆ ಮಾರ್ಚ್ 15 ರಂದು ಸಮನ್ಸ್ ನೀಡಿದೆ. ಆಪಾದಿತ ಹಗರಣ ಪ್ರಕರಣದ ಮುಂದಿನ ತನಿಖೆಯನ್ನು ಸಂಸ್ಥೆ ತೆರೆದಿಟ್ಟಿದೆ. ಪ್ರಕರಣದ ಮುಂದಿನ ತನಿಖೆಗೆ ಸಂಬಂಧಿಸಿದಂತೆ ಸಿಬಿಐ ತಂಡ ಭೇಟಿ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.