ಬೀದಿ ಬದಿ ವ್ಯಾಪಾರಿಗಳಿಗೆ ಸಿಹಿ ಸುದ್ದಿ ಕೊಟ್ಟ ಸರ್ಕಾರ

ಬೀದಿ ಬದಿ ವ್ಯಾಪಾರಿಗಳಿಗೆ ಸಿಹಿ ಸುದ್ದಿ ಕೊಟ್ಟ ಸರ್ಕಾರ

ಬೀದಿ ಬದಿ ವ್ಯಾಪಾರಿಗಳಿಗೆ ನೆರವಾಗುವ ಉದ್ದೇಶದಿಂದ ಪಿಎಂ ಬೀದಿಬದಿ ವ್ಯಾಪಾರಿಗಳ ಆತ್ಮ ನಿರ್ಭರ ನಿಧಿ ಅಡಿ ಸಾಲ ಸೌಲಭ್ಯವನ್ನು ನೀಡಲಾಗುತ್ತಿದೆ.

ಆದರೆ ಸಾಲದ ಕರಾರುಗಳ ಮೇಲೆ ಮುದ್ರಾಂಕ ಶುಲ್ಕವನ್ನು ವಿಧಿಸಲಾಗುತ್ತಿದ್ದು, ಇದೀಗ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ.

ಬೀದಿಬದಿ ವ್ಯಾಪಾರಿಗಳಿಗೆ ಸಾಲದ ಕರಾರುಗಳ ಮೇಲೆ ವಿಧಿಸುತ್ತಿದ್ದ ಮುದ್ರಾಂಕ ಶುಲ್ಕ ರದ್ದುಗೊಳಿಸುವ ಉದ್ದೇಶದಿಂದ 'ಕರ್ನಾಟಕ ಸ್ಟ್ಯಾಂಪ್ (4ನೇ ತಿದ್ದುಪಡಿ) ವಿಧೇಯಕ 2022 ಜಾರಿಗೊಳಿಸಲಾಗಿದ್ದು, ಶುಕ್ರವಾರದಂದು ವಿಧಾನಸಭೆಯಲ್ಲಿ ಇದಕ್ಕೆ ಸರ್ವಾನುಮತದ ಅನುಮೋದನೆ ಸಿಕ್ಕಿದೆ.