ಬೃಹತ್‌ ವೇಶ್ಯಾವಾಟಿಕೆ ಜಾಲ ಪತ್ತೆ: 14,190 ಸಂತ್ರಸ್ತೆಯರು ಸಿಲುಕಿದ್ದಾರೆ

ಬೃಹತ್‌ ವೇಶ್ಯಾವಾಟಿಕೆ ಜಾಲ ಪತ್ತೆ: 14,190 ಸಂತ್ರಸ್ತೆಯರು ಸಿಲುಕಿದ್ದಾರೆ

ವೇಶ್ಯಾವಾಟಿಕೆ ನಡೆಸುತ್ತಿದ್ದ ಸಂಘಟಿತವಾದ ಬೃಹತ್‌ ಜಾಲವೊಂದನ್ನು ಸೈಬರಾಬಾದ್‌ ಪೊಲೀಸರು ಭೇದಿಸಿದ್ದಾರೆ. ಈ ವೇಶ್ಯಾವಾಟಿಕೆ ಜಾಲದಲ್ಲಿ ಕರ್ನಾಟಕ, ಪಶ್ಚಿಮ ಬಂಗಾಳ ಸೇರಿದಂತೆ ದೇಶದ ವಿವಿಧ ರಾಜ್ಯಗಳ 14,190 ಸಂತ್ರಸ್ತೆಯರು ಸಿಲುಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಜಾಲವು ಎಂಡಿಎಂಎ ಎನ್ನುವ ಮಾದಕವಸ್ತುವಿನ ಬಳಕೆ ಸೇರಿದಂತೆ ಅನೇಕ ಅಪರಾಧ ಪ್ರಕರಣ‌ಗಳಲ್ಲಿ ಭಾಗಿಯಾಗಿತ್ತು ಎಂದು ಪೊಲೀಸರು ಆರೋಪಿಸಿದ್ದಾರೆ. ಮಾನವಕಳ್ಳ ಸಾಗಣೆ ತಡೆ ಕಾಯ್ದೆ 1956ರ ಅನ್ವಯ 17 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.