ಬೆಂಕಿಗೆ ಆಹುತಿಯಾದ ಭತ್ತದ ಕಾಳಿನ ಬಣವೆ

ಭತ್ತದ ಕಾಳು ಹೊಂದಿದ್ದ ಹುಲ್ಲಿನ ಬಣವೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಸುಟ್ಟು ಕರಕಲಾದ ಘಟನೆ ಶಿಗ್ಗಾವಿ ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ನಡೆದಿದೆ.
ಸುಮಾರು ಒಂದೂವರೆ ಎಕರೆ ಜಮೀನಿನಲ್ಲಿ ಬೆಳೆದಿದ್ದ ಭತ್ತದ ಕಾಳು ಹೊಂದಿದ್ದ ಈ ಬಣವೆ, ಹುಣಸಿಕಟ್ಟಿ ಗ್ರಾಮದ ನೀಲವ್ವ ಹರಿಜನ ಎಂಬುವರಿಗೆ ಸೇರಿದ್ದಾಗಿದೆ.
ಬಂಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಶಿಗ್ಗಾವಿಯ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.