ಬೆಂಗಳೂರಲ್ಲಿ ನಾಳೆಯಿಂದ 'ಏರ್ ಶೋ' ಆರಂಭ : 'ಲೋಹದ ಹಕ್ಕಿಗಳ ಚಿತ್ತಾರ' ವೀಕ್ಷಿಸಲು ಟಿಕೆಟ್ ಬೆಲೆ ಎಷ್ಟು ಗೊತ್ತಾ..?

ಬೆಂಗಳೂರಲ್ಲಿ ನಾಳೆಯಿಂದ 'ಏರ್ ಶೋ' ಆರಂಭ : 'ಲೋಹದ ಹಕ್ಕಿಗಳ ಚಿತ್ತಾರ' ವೀಕ್ಷಿಸಲು ಟಿಕೆಟ್ ಬೆಲೆ ಎಷ್ಟು ಗೊತ್ತಾ..?

ಬೆಂಗಳೂರು : ಫೆಬ್ರವರಿ 13 ರ ನಾಳೆಯಿಂದ ಯಲಹಂಕ ವಾಯುನೆಲೆಯಲ್ಲಿ ಏರ್ ಶೋ ವೈಮಾನಿಕ ಪ್ರದರ್ಶನ ನಡೆಯಲಿದೆ. ಹೀಗಾಗಿ ನಗರದ ಹಲವು ರಸ್ತೆಗಳಲ್ಲಿ ಕೆಲವೊಂದು ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಈ ಬಾರಿಯ ಏರ್ ಶೋ ವೀಕ್ಷಣೆಗೆ ಸಾರ್ವಜನಿಕರಿಗೆ ಯಾವುದೇ ನಿರ್ಬಂಧವಿಲ್ಲ.

ಏರೋ ಇಂಡಿಯಾ ಅಧಿಕೃತ ವೆಬ್ ಸೈಟ್ ಮೂಲಕ ಟಿಕೆಟ್ ಖರೀದಿಸಬಹುದಾಗಿದೆ. ಕೇವಲ ವಿಮಾನಗಳನ್ನು ನೋಡುವ ಸ್ಥಳದ ಪ್ರವೇಶಕ್ಕೆ 1 ಸಾವಿರ ರೂ. ಶುಲ್ಕ ನಿಗದಿಪಡಿಸಲಾಗಿದೆ. ವಿಮಾನಗಳು ಹಾಗೂ ಎಕ್ಸಿಬಿಷನ್ ನೋಡಲು ಟಿಕೆಟ್ ಗೆ 2 ಸಾವಿರದ 500 ರೂಪಾಯಿ ಟಕೆಟ್ ದರ ನಿಗದಿಪಡಿಸಲಾಗಿದೆ. ಮೊದಲು 2 ದಿನ ಉದ್ಯಮಕ್ಕೆ ಸಂಬಂಧಿಸಿದವರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗಿದ್ದು, ಕೊನೆಯ 3 ದಿನ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.

ಬೆಂಗಳೂರು ನಗರದ ಯಲಹಂಕ ವಾಯುಸೇನಾ ನೆಲೆಯಲ್ಲ ದಿ:13-02-2023 ರಿಂದ 17-02-2023 ರವರೆಗೆ ಪ್ರತಿಷ್ಠಿತ ಏರೋ ಇಂಡಿಯಾ-2023 ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ದಿ:13- 02-2023 ರ ಬೆಳಗ್ಗೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿಗಳು, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಗಣ್ಯಾತಿಗಣ್ಯ ವ್ಯಕ್ತಿಗಳು, ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಮತ್ತು ತುರ್ತು ಸೇವಾ ವಾಹನಗಳ ಸುಗಮ ಸಂಚಾರಕ್ಕಾಗಿ ಹಾಗೂ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಚರಿಸುವ ವಾಹನಗಳ ಸುಗಮ ಸಂಚಾರದ ಹಿತದೃಷ್ಠಿಯಿಂದ ದಿ:13- 02-2023 ರಂದು ಬೆಳಗ್ಗೆ 6-00 ಗಂಟೆಯಿಂದ 8-00 ಗಂಟೆಯವರೆಗೆ ಕಾರ್ಯಕ್ರಮದ ದಿವಸಗಳಂದು ಸಂಬಂಧಿಸಿದ ಈ ಕೆಳಕಂಡ ರಸ್ತೆಗಳಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ರಸ್ತೆ ಬದಿಗಳಲ್ಲಿ ವಾಹನಗಳ ನಿಲುಗಡೆ ನಿಷೇಧಿಸುವುದು ಮತ್ತು ಏಕಮುಖ ಸಂಚಾರ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಜಾರಿಗೆ ತರಲಾಗಿದೆ.