ಬೆಂಗಳೂರಿನ 'HAL' ಏರ್ ಪೋರ್ಟ್ ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರಿನ 'HAL' ಏರ್ ಪೋರ್ಟ್ ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು : ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು  ಇದೀಗ ಸಿಲಿಕಾನ್ ಸಿಟಿ ಬೆಂಗಳೂರಿಗೆ ಬಂದಿಳಿದಿದ್ದಾರೆ.

ಈ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿ ಹಲವರು ಹೆಚ್ ಎ ಎಲ್ ಏರ್ಪೋರ್ಟ್ ನಲ್ಲಿ ಪ್ರಧಾನಿ ಮೋದಿಗೆ ಸ್ವಾಗತ ಕೋರಿದ್ದಾರೆ.ವಿಶೇಷ ವಿಮಾನದ ಮೂಲಕ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿ ನಂತರ ವಿಧಾನಸೌಧಕ್ಕೆ ತೆರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಅಲ್ಲದೇ ಕೆಂಪೇಗೌಡ ವಿಮಾನ ನಿಲ್ದಾಣದ ಬಳಿಯಲ್ಲಿನ ಕೆಂಪೇಗೌಡ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ.ನಂತರ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿ ರಾಜ್ಯದ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಬೆಂಗಳೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ನಗರದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.ನಗರದಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಮಂದಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ

ವಹಿಸಲಾಗಿದೆ.

ನಗರ ಪೊಲೀಸ್ ಆಯುಕ್ತ ಸಿ.ಹೆಚ್ ಪ್ರತಾಪ್ ರೆಡ್ಡಿ ಅವರೇ ಭದ್ರತೆಯ ಉಸ್ತುವಾರಿ ವಹಿಸಲಿದ್ದು, ಇವರ ಮಾರ್ಗದರ್ಶನದಲ್ಲಿ ಹೆಚ್ಚವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಸುಬ್ರಹ್ಮಣ್ಯೇಶ್ವರ ರಾವ್, ಜಂಟಿ ಪೊಲೀಸ್ ಆಯುಕ್ತ ಬಿ.ಆರ್ ರವಿಕಾಂತೇಗೌಡ , ರಮಣಗುಪ್ತ ಸೇರಿದಂತೆ ಐವರು ಡಿಸಿಪಿಗಳು ಭದ್ರತೆ ಜವಾಬ್ದಾರಿ ವಹಿಸಲಿದ್ದಾರೆ.

ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸುಗಮ ಸಂಚಾರ ವ್ಯವಸ್ಥೆಗೆ ಅಡಚಣೆಯಾಗದಂತೆ ಹಾಗೂ ಭದ್ರತಾ ದೃಷ್ಟಿಯಿಂದ ವಿಧಾನಸೌಧ, ರಾಜಭವನ ಸೇರಿದಂತೆ ಹಲವು ರಸ್ತೆಗಳಲ್ಲಿ ಸಂಚಾರವನ್ನು ನಿಷೇಧಿಸಲಾಗಿದೆ.ಏರ್ಪೋಟ್ ಬಳಿ ಸಮಾವೇಶ ನಡೆಯಲಿದ್ದುಮ . ಈ ಹಿನ್ನೆಲೆ ಭರ್ಜರಿ ತಯಾರಿ ನಡೆಸಲಾಗುತ್ತಿದೆ. ಮೋದಿ ಸಮಾವೇಶಕ್ಕೆ ಬರುವ 2 ಲಕ್ಷಕ್ಕೂ ಹೆಚ್ಚು ಜನರಿಗೆ ಅಡುಗೆ ಸಿದ್ದ ಮಾಡಲಾಗುತ್ತಿದೆ. ಸುಮಾರು 700 ಕ್ಕೂ ಅಧಿಕ ಬಾಣಸಿಗರಿಂದ ಬೆಳಗ್ಗೆ ತಿಂಡಿ ಮತ್ತು ಮಧ್ಯಾಹ್ನ ಊಟಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.

ತಿಂಡಿಗೆ ಟಮೋಟ ಬಾತ್, ಮೈಸೂರು ಪಾಕ್ ಇದ್ರೆ. ಮಧ್ಯಾಹ್ನದ ಊಟಕ್ಕೆ ಪಲಾವ್, ಮೊಸರು ಬಜ್ಜಿ, ಮೊಸರನ್ನ ಮತ್ತು ಅಕ್ಕಿ ಪಾಯಸ ಮಾಡಲಾಗುತ್ತಿದೆ. . ಬೆಳಗ್ಗೆ 08 ಗಂಟೆಯಿಂದ ತಿಂಡಿ ವ್ಯವಸ್ಥೆಯಿರಲಿದೆ. ಈಗಾಗಲೆ ಏರ್ಪೋಟ್ ಸಮಾವೇಶದ ಬಳಿ ಅಡುಗೆ ತಯಾರಿಯಲ್ಲಿ ಬಾಣಸಿಗರು ನಿರತರಾಗಿದ್ದಾರೆ. ಊಟ ತಿಂಡಿ ಬಡಿಸಲು 150 ಕೌಂಟರ್ ಗಳ ವ್ಯವಸ್ಥೆ ಮಾಡಲಾಗಿದೆ.