ಬೆಂಗಳೂರಿನ ಕುಖ್ಯಾತ ರೌಡಿಶೀಟರ್ ಮುನೇಲ್ ಬಂಧನ

ಬೆಂಗಳೂರು : ಕಳೆದ 2 ವರ್ಷದಿಂದ ತಲೆಮರೆಸಿಕೊಂಡು ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿದ್ದ ರೌಡಿಶೀಟರ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಮುನೇಲ್ ಎಂಬ ರೌಡಿ ಶೀಟರ್ ನನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಕಳೆದ 2 ವರ್ಷದ ಹಿಂದೆಯೇ ನಾಪತ್ತೆಯಾಗಿದ್ದ ಮುನೇಲ್ ವಿರುದ್ಧ ಬೆಂಗಳೂರು ದಕ್ಷಿಣ ವಿಭಾಗದ ವಿವಿಧ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು, ಇಂದು ಖಚಿತ ಮಾಹಿತಿ ಮೇರೆಗೆ ಪುಟ್ಟೇನಹಳ್ಳಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.