ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್
ಬೆಂಗಳೂರು : ಬೆಂಗಳೂರಿನ ಖಾಸಗಿ ಶಾಲೆಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರಿನ ರಾಜಾಜಿನಗರ ಎನ್ ಪಿ ಎಸ್ ಶಾಲೆಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಪೋಷಕರು, ಮಕ್ಕಳು, ಶಿಕ್ಷಕರು ಬೆಚ್ಚಿಬಿದ್ದಿದ್ದಾರೆ.
ಕೂಡಲೇ ಶಿಕ್ಷಕರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದು, ಘಟನೆ ನಡೆದ ಸ್ಥಳಕ್ಕೆ ಬಸವೇಶ್ವರನಗರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.ಜೊತೆಗೆ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಕೂಡ ಶಾಲೆಯತ್ತ ಧಾವಿಸಿ ತಪಾಸಣೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.