ಬೆಂಗಳೂರಿನ ರಸ್ತೆಗಳ ಸ್ಥಿತಿ: 'ಸರ್ ದಯವಿಟ್ಟು ಸಹಾಯ ಮಾಡಿ' ಎಂದು ಪ್ರಧಾನಿಗೆ ಮನವಿ ಮಾಡಿದ ಖ್ಯಾತ ಉದ್ಯಮಿ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಅವರ ಬೆಂಗಳೂರಿನ ಪ್ರವಾಸದ ಹಿನ್ನೆಲೆಯಲ್ಲಿ ನಗರದ ರಸ್ತೆಗಳ ಪರಿಸ್ಥಿತಿ ಉಲ್ಲೇಖಿಸಿ ಖ್ಯಾತ ಉದ್ಯಮಿ ಟಿ.ವಿ.ಮೋಹನ್ದಾಸ್ ಪೈ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಹದೇವಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಣತ್ತೂರು ಪ್ರದೇಶದ ವಿದ್ಯಾರ್ಥಿಗಳು ಮತ್ತು ಪೋಷಕರು ಉತ್ತಮ ರಸ್ತೆಗಾಗಿ ಮೇಣದಬತ್ತಿ ಮತ್ತು ಮೊಬೈಲ್ ಟಾರ್ಚ್ಗಳನ್ನು ಹಿಡಿದು ಮೌನ ಪ್ರತಿಭಟನೆ ನಡೆಸಿದ್ದರು.
ಅಲ್ಲದೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಇತರ ಹಲವರನ್ನು ಟ್ಯಾಗ್ ಮಾಡಿದ ಅವರು i ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರು ಏನು ಮಾಡುತ್ತಿದ್ದಾರೆ? ಬೆಂಗಳೂರಿನಲ್ಲಿ ಈ ಸಮಸ್ಯೆ ಬಗೆಹಿಸುವ ಕ್ರಮ ಭರವಸೆ ಇದೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.