ಬೆಂಗಳೂರಿನ ರಿಂಗ್ ರಸ್ತೆಗೆ ನಟ ಪುನೀತ್ ಹೆಸರಿಡಲು ತೀರ್ಮಾನ : ಸಚಿವ ಆರ್.ಅಶೋಕ್

ಬೆಂಗಳೂರಿನ ರಿಂಗ್ ರಸ್ತೆಗೆ ನಟ ಪುನೀತ್ ಹೆಸರಿಡಲು ತೀರ್ಮಾನ : ಸಚಿವ ಆರ್.ಅಶೋಕ್

ಬೆಂಗಳೂರು : ಬೆಂಗಳೂರಿನ ರಿಂಗ್ ರಸ್ತೆಗೆ ನಟ ಪುನೀತ್ ರಾಜ್ ಕುಮಾರ್ ಹೆಸರಿಡಲು ತೀರ್ಮಾನ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಆರ್.ಅಶೋಕ್, ನಿನ್ನೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ತುಂಬಾ ಚೆನ್ನಾಗಿ ನಡೆದಿದೆ.

ಮಳೆಯ ನಡುವೆಯೂ ಕಾರ್ಯಕ್ರಮ ಚೆನ್ನಾಗಿ ನಡೆಯತು. ಬೆಂಗಳೂರಿನ ರಿಂಗ್ ರಸ್ತೆಗೆ ಪುನೀತ್ ರಾಜ್ ಕುಮಾರ್ ಹೆಸರು ಇಡಲು ನಿರ್ಧಾರ ಮಾಡಲಾಗಿದೆ ಎಂದರು.

ಪತ್ರಕರ್ತರಿಗೆ ಗಿಫ್ಟ್ ನಲ್ಲಿ ಹಣ ನೀಡಿದ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಸಚಿವ ಆರ್.ಅಶೋಕ್, ಹಣದ ಬಗ್ಗೆ ಮಾಹಿತಿ ಇಲ್ಲ ಎಂದು ಸಿಎಂ ಈಗಾಗಲೇ ಹೇಳಿದ್ದಾರೆ. ಈ ಬಗ್ಗೆ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ . ಕಾಂಗ್ರೆಸ್ ಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಭ್ರಷ್ಟಾಚಾರ ಹುಟ್ಟಿ ಹಾಕಿದ್ದೇ ಕಾಂಗ್ರೆಸ್ ಎಂದು ವಾಗ್ದಾಳಿ ನಡೆಸಿದರು.