ಬೆಂಗಳೂರಿನ 'ರೇಸ್ ಕೋರ್ಸ್' ರಸ್ತೆಗೆ ನಟ 'ಅಂಬರೀಷ್' ಹೆಸರು ನಾಮಕರಣ
ಬೆಂಗಳೂರು : ನಗರದ ರೇಸ್ ಕೋರ್ಸ್ ರಸ್ತೆಗೆ ಸ್ಯಾಂಡಲ್ ವುಡ್ ಹಿರಿಯ ನಟ ಅಂಬರೀಶ್ ಹೆಸರು ಇಡಲಾಗಿದೆ. ಇಂದು ಸಿಎಂ ಬೊಮ್ಮಾಯಿ ನಟ ಅಂಬರೀಶ್ ಹೆಸರಿನ ನಾಮಫಲಕ ಉದ್ಘಾಟಿಸಿದರು.
ಶಿವಾಜಿನಗರ ಕ್ಷೇತ್ರಕ್ಕೆ ಒಳಪಡುವ ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಅವರ ಹೆಸರನ್ನು ನಾಮಕರಣ ಮಾಡಲಾಗಿದೆ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಅಂಬರೀಶ್ ಅವರ ಹೆಸರನ್ನು ರೇಸ್ ಕೋರ್ಸ್ ರಸ್ತೆಗೆ ಇಡುವಂತೆ ಸರಕಾರಕ್ಕೆ ಮನವಿ ಮಾಡಿತ್ತು. ಈ ಮೂಲಕ ಹಲವು ದಿನಗಳ ಅಭಿಮಾನಿಗಳ ಬೇಡಿಕೆ ಈ ಮೂಲಕ ಈಡೇರಿದಂತಾಗಿದೆ.ಕನ್ನಡ ಚಿತ್ರ ಜಗತ್ತಿಗೆ ಅಂಬರೀಶ್ ಕೊಟ್ಟಿರುವ ಕೊಡುಗೆ ಅಪಾರವಾಗಿದೆ. ಕಲಾವಿದರಿಗೆ ಮತ್ತು ತಂತ್ರಜ್ಞರಿಗೆ ಸಾಕಷ್ಟು ಸಹಾಯವನ್ನೂ ಅಂಬರೀಶ್ ಮಾಡಿದ್ದಾರೆ. ರಾಜಕಾರಣಿಯಾಗಿಯೂ ಅವರು ಸಾಕಷ್ಟು ಜನಪರ ಕೆಲಸಗಳನ್ನು ಮಾಡಿದ್ದಾರೆ. ಈ ಎಲ್ಲ ಸೇವೆಯನ್ನು ಪರಿಗಣಿಸಿರುವ ಸರ್ಕಾರ ರೇಸ್ ಕೋರ್ಸ್ ರಸ್ತೆಗೆ ಹೆಸರು ಅಂಬರೀಷ್ ಹೆಸರನ್ನು ಇಟ್ಟಿದೆ.
ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : 'ಅಗ್ನಿವೀರ್' ವಾಯು ಹುದ್ದೆಗೆ ಅರ್ಜಿ ಆಹ್ವಾನ
ಶಿವಮೊಗ್ಗ : ಭಾರತೀಯ ವಾಯುಪಡೆಯ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲು ಭಾರತೀಯ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ನೊಂದಾಯಿಸಲು ಅಧಿಸೂಚನೆ ಹೊರಡಿಸಿದೆ.
ಅರ್ಜಿ ಸಲ್ಲಿಸಲು ದ್ವಿತೀಯ ಪಿ.ಯು.ಸಿ ಯಲ್ಲಿ ಶೇ.50% ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಅಥವಾ ಡಿಪೆÇ್ಲಮಾ ವಿಭಾಗದ (ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಆಟೋಮೊಬೈಲ್, ಕಂಪ್ಯೂಟರ್ ಸೈನ್ಸ್, ಇನ್ಸ್ಟ್ರುಮೆಂಟ್ ಟೆಕ್ನಾಲಜಿ, ಇನ್ಫಾರ್ಮೇಷನ್ ಟೆಕ್ನಾಲಜಿಯಲ್ಲಿ) ಶೇ.50% ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ವಯಸ್ಸು ( 26-12-2002 ರಿಂದ 26-06-2006) 17.5 ರಿಂದ 21 ವರ್ಷಗಳನ್ನು ಒಳಗೊಂಡಿರುವ ಅವಿವಾಹಿತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.ಆಸಕ್ತ ಅಭ್ಯರ್ಥಿಗಳು ಸಂಪೂರ್ಣ ವಿವರಗಳಿಗೆ ಹಾಗೂ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಗಾಗಿ https://agnipathvayu.cdac.in ಜಾಲತಾಣಕ್ಕೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಲು ಮಾ.31 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ನೇರವಾಗಿ ಅಥವಾ ದೂರವಾಣಿ ಸಂಖ್ಯೆ : 08182-255293, 9380663606 ಮೂಲಕ ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.