ಬೆಂಗಳೂರಿನ ಹೊಸಕೋಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ: ಮೂವರಿಗೆ ಗಾಯ

ಬೆಂಗಳೂರು: ಹೊಸಕೋಟೆ ಬಳಿಯಲ್ಲಿ ಮಂತ್ರಾಲಯದಿಂದ ಕೋಲಾರಕ್ಕೆ ತೆರಳುತ್ತಿದ್ದಂತ ಕೆ ಎಸ್ ಆರ್ ಟಿ ಸಿ ಬಸ್ ( KSRTC Bus ), ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ ಪಲ್ಟಿಯಾದ ಪರಿಣಾಮ ಮೂವರು ಪ್ರಯಾಣಿಕರು ಗಾಯಗೊಂಡಿರೋದಾಗಿ ತಿಳಿದು ಬಂಗಿದೆ.
ಮಂತ್ರಾಲಯದಿಂದ ಕೋಲಾರಕ್ಕೆ ತೆರಳುತ್ತಿದ್ದಂತ ಕೆ ಎಸ್ ಆರ್ ಟಿ ಸಿ ಬಸ್ ವೊಂದು, ಚಾಲಕನ ನಿಯಂತ್ರಣ ತಪ್ಪಿ ಸರ್ವಿಸ್ ರಸ್ತೆಯಲ್ಲಿನ ಹಳ್ಳಕ್ಕೆ ಬಿದ್ದಿದೆ. ಈ ಪರಿಣಾಮ ಬಸ್ ನಲ್ಲಿದ್ದಂತ 12 ಪ್ರಯಾಣಿಕರಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ.ಗಾಯಾಳು ಪ್ರಯಾಣಿಕರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಘಟನೆಗೆ ಅಜಾಗರೂಕ ಚಾಲನೆಯೇ ಕಾರಣ ಎನ್ನಲಾಗುತ್ತಿದೆ. ಈ ಸಂಬಂಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.