ಬೆಂಗಳೂರಿನ ಮೂರು ಭಾಗದಲ್ಲಿ ಕ್ಲಸ್ಟರ್ ಬ್ರೇಕ್ ಔಟ್​; ಸ್ಕೂಲು, ಕಾಲೇಜುಗಳಲ್ಲೇ ಹೆಚ್ಚಾಯ್ತು ಸೋಂಕಿತರ ಸಂಖ್ಯೆ

ಬೆಂಗಳೂರಿನ ಮೂರು ಭಾಗದಲ್ಲಿ ಕ್ಲಸ್ಟರ್ ಬ್ರೇಕ್ ಔಟ್​; ಸ್ಕೂಲು, ಕಾಲೇಜುಗಳಲ್ಲೇ ಹೆಚ್ಚಾಯ್ತು ಸೋಂಕಿತರ ಸಂಖ್ಯೆ

ದಿ ಇಂಟರ್ನ್ಯಾಷನಲ್ ಸ್ಕೂಲ್​ನಲ್ಲಿ ಮೊದಲು ಇಬ್ಬರು ವಿದ್ಯಾರ್ಥಿಗಳಿಗೆ ಜ್ವರ, ನೆಗಡಿ ಪತ್ತೆಯಾಗಿತ್ತು. ಈ ಇಬ್ಬರು ವಿದ್ಯಾರ್ಥಿಗಳು ನಾಗಪುರದವರಾಗಿದ್ದಾರೆ. ನಂತರ ಪರೀಕ್ಷೆ ಮಾಡಿದಾಗ ಕೊರೊನಾ ಸೋಂಕು ಧೃಡವಾಗಿದೆ.ಬೆಂಗಳೂರು: ನಗರದಲ್ಲಿ ಮತ್ತೆ ಕೊರೊನಾ (Coronavirus) ಆತಂಕ ಹೆಚ್ಚಾಗಿದೆ.

ಅದರಲ್ಲೂ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕು ಹೆಚ್ಚಿನ ಸಂಖ್ಯೆಯಲ್ಲಿ ಹರಡುತ್ತಿದೆ. ಆನೇಕಲ್ ಬಳಿಯ ಮರಸೂರಿನ ಸ್ಫೂರ್ತಿ ನರ್ಸಿಂಗ್ ಕಾಲೇಜಿನಲ್ಲಿ 12 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇನ್ನು ಆನೇಕಲ್ ತಾಲೂಕಿನ ದೊಮ್ಮಸಂದ್ರದ ದಿ ಇಂಟರ್ನ್ಯಾಷನಲ್ ಸ್ಕೂಲ್​ನಲ್ಲಿ 47 ಮಕ್ಕಳಿಗೆ ಸೋಂಕು ಕಾಣಿಸಿಕೊಂಡಿದೆ. ನಿನ್ನೆ ಇದೇ ಸ್ಕೂಲ್​ನಲ್ಲಿ (School) 33 ಮಕ್ಕಳಿಗೆ ಸೋಂಕು ಕಾಣಿಸಿಕೊಂಡಿತ್ತು. ಆದರೆ ಇಂದು (ನವೆಂಬರ್ 27) ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಅಷ್ಟೇ ಅಲ್ಲದೇ ಸುಕ್ರುತ ಕಾಲೇಜಿನಲ್ಲಿ 17 ಜನರಿಗೆ ಸೋಂಕು ದೃಢಪಟ್ಟಿದೆ.

ದಿ ಇಂಟರ್ನ್ಯಾಷನಲ್ ಸ್ಕೂಲ್​ನಲ್ಲಿ ಮೊದಲು ಇಬ್ಬರು ವಿದ್ಯಾರ್ಥಿಗಳಿಗೆ ಜ್ವರ, ನೆಗಡಿ ಪತ್ತೆಯಾಗಿತ್ತು. ಈ ಇಬ್ಬರು ವಿದ್ಯಾರ್ಥಿಗಳು ನಾಗಪುರದವರಾಗಿದ್ದಾರೆ. ನಂತರ ಪರೀಕ್ಷೆ ಮಾಡಿದಾಗ ಕೊರೊನಾ ಸೋಂಕು ಧೃಡವಾಗಿದೆ. ಬಳಿಕ ಇದೇ ಸ್ಕೂಲ್​ನ 400ಕ್ಕೂ ಅಧಿಕ ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದ್ದು, ಮೊದಲು 33 ಜನರಿಗೆ ಸೋಂಕು ಧೃಡವಾಗಿತ್ತು. ಈಗ ಈಗ ಸೋಂಕಿತರ ಸಂಖ್ಯೆ 47 ಕ್ಕೆ ಏರಿಕೆಯಾಗಿದೆ. ಮತ್ತಷ್ಟು ಸೋಂಕಿತರು ಪತ್ತೆಯಾಗುವ ಸಾಧ್ಯತೆ ಇದೆ.

ರಾಜ್ಯದ ಜನತೆ ಇನ್ನು ಕೊರೊನಾ ಕಡಿಮೆಯಾಗಿದೆ ಎಂದು ಮೈಮರೆಯುವ ಹಾಗೆ ಇಲ್ಲ. ಏಕೆಂದರೆ ಡೆಲ್ಟಾಗಿಂತಲೂ ವೇಗವಾಗಿ ಕೊರೊನಾ ಹೊಸ ರೂಪಾಂತರಿ ಹರಡುತ್ತಿರುವುದು ಪತ್ತೆಯಾಗಿದೆ. ಬೋಟ್ಸ್ವಾನನಾದಲ್ಲಿ 3, ದಕ್ಷಿಣ ಆಫ್ರಿಕಾದಲ್ಲಿ 6, ಹಾಂಕಾಂಗ್‌ನಲ್ಲಿ 1 ಹೊಸ ತಳಿ ಪತ್ತೆಯಾಗಿದೆ. ಬಿ.1.1529 ಹೊಸ ತಳಿ ಹೆಚ್ಚು ವೇಗವಾಗಿ ಹರಡಲಿದೆ ಎಂದು ತಜ್ಞರು ಕೂಡ ಹೇಳಿದ್ದಾರೆ. ಅಲ್ಲದೇ ವ್ಯಾಕ್ಸಿನ್ ಪ್ರೊಟೆಕ್ಷನ್ ಮೀರಿ ಸೋಂಕು ತೀವ್ರಗೊಳಿಸುವ ಬಗ್ಗೆ ತಜ್ಞರು ಎಚ್ಚರಿಸಿದ್ದಾರೆ.

ಕೇಂದ್ರದಿಂದಲೂ ರಾಜ್ಯ ಆರೋಗ್ಯ ಇಲಾಖೆಗೆ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಮೂರು ದೇಶಗಳಿಂದ ಬರುವವರಿಗೆ ಕಡ್ಡಾಯ ಟೆಸ್ಟ್, ಸ್ಕ್ರೀನಿಂಗ್ ಹಾಗೂ ಟ್ರಾಕಿಂಗ್ ಮಾಡುವಂತೆ ಸೂಚನೆ ನೀಡಲಾಗಿದೆ. ಡೆಲ್ಟಾಗಿಂತ ವೇಗವಾಗಿ ಹರಡಬಲ್ಲ ಕೊರೊನಾ ಬಿ.1.1529 ಹೊಸ ತಳಿ ಬಗ್ಗೆ ತಜ್ಞರು ಕೂಡ ಆತಂಕ ವ್ಯಕ್ತಡಿಸಿದ್ದು, ಡಿಸೆಂಬರ್ – ಜನವರಿ ಎರಡು ತಿಂಗಳ ಕಟ್ಟೆಚ್ಚರ ವಹಿಸುವಂತೆ ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ ನೀಡಿದೆ.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ನ ಮರಸೂರು ಬಳಿಯಿರುವ ಸ್ಫೂರ್ತಿ ನರ್ಸಿಂಗ್ ಕಾಲೇಜಿನಲ್ಲಿ ಕೊರೊನಾ ಹಿನ್ನೆಲೆ ಸಿಬ್ಬಂದಿಗಳು ವಿದ್ಯಾರ್ಥಿಗಳನ್ನು ವಾಪಸ್ ಮನೆಗೆ ಕಳಿಸಿದ್ದಾರೆ. ಇನ್ನೂ 106 ವಿದ್ಯಾರ್ಥಿಗಳ ಟೆಸ್ಟ್ ರಿಪೋರ್ಟ್ ಬರಬೇಕಿದೆ. ಆದರೆ ಅದಕ್ಕೂ ಮುನ್ನವೇ ವಿದ್ಯಾರ್ಥಿಗಳನ್ನು ಮನೆಗಳಿಗೆ ಕಳಿಸುತ್ತಿದ್ದಾರೆ.

ಕೇರಳದಲ್ಲಿ ನ್ಯೂರೋ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್‌ಪೋಸ್ಟ್‌ನಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಆರೋಗ್ಯ ಸಿಬ್ಬಂದಿಗಳು ಗಡಿಯಲ್ಲಿ ಸರ್ವೆ ಮಾಡುತ್ತಿದ್ದು, ಮನೆ ಮನೆಗೆ ಹೋಗಿ ಸರ್ವೆ ಕಾರ್ಯ ಮುಂದುವರಿಸಿದ್ದಾರೆ. ಸದ್ಯ ಕೇರಳದ ವೈನಾಡಿನಲ್ಲಿ 13 ಪ್ರಕರಣ ಪತ್ತೆಯಾಗಿದೆ. ಹೀಗಾಗಿ ಕೇರಳದಿಂದ ಬಂದಿರುವವರ ಬಗ್ಗೆ ನಿಗಾ ಇಡಲು ಸೂಚನೆ ನೀಡಲಾಗಿದೆ. ಕೇರಳದಿಂದ ಬಂದು ವಾಂತಿ, ಭೇದಿ ಕಾಣಿಸಿಕೊಂಡರೆ ಅಂತವರಿಗೆ ಪರೀಕ್ಷೆ ಮಾಡಿಸಿಕೊಳ್ಳಲು ಸೂಚನೆ‌ ನೀಡಲಾಗಿದೆ ಎಂದು ಟಿವಿ9ಗೆ ಹೆಚ್.ಡಿ.ಕೋಟೆ ತಾಲೂಕು ಆರೋಗ್ಯಧಿಕಾರಿ ರವಿಕುಮಾರ್ ಮಾಹಿತಿ ನೀಡಿದ್ದಾರೆ.