ಬೆಂಗಳೂರಿನಲ್ಲಿವೆ 31,211 ರಸ್ತೆ ಗುಂಡಿ: ಗುಂಡಿ ಮುಚ್ಚಲು ಬಿಬಿಎಂಪಿ ಆದೇಶ
ಬೆಂಗಳೂರಿನಲ್ಲಿ ; ರಸ್ತೆ ಗುಂಡಿ ಜಾಗತಿಕ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದ್ದು, ನಗರದಲ್ಲಿನ 31 ಸಾವಿರ ಗುಂಡಿಗಳನ್ನು ಕೂಡಲೇ ಮುಚ್ಚಬೇಕು. ಈ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಆಯುಕ್ತ ರಾಕೇಶ್ ಸಿಂಗ್ ಎಚ್ಚರಿಸಿದ್ದಾರೆ.
ಬೆಂಗಳೂರಿನ ರಸ್ತೆ ಗುಂಡಿ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ತರಾಟೆಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಶನಿವಾರ ದಿಢೀರ್ ಸಭೆ ನಡೆಸಿ ರಸ್ತೆ ಗುಂಡಿ ಮುಚ್ಚುವುದರಲ್ಲಿ ನಿರ್ಲಕ್ಷ್ಯ ವಹಿಸಿದರೆ ವಲಯ ಆಯುಕ್ತರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಗುರುವಾರ ಮಲ್ಲೇಶ್ವರದಲ್ಲಿ ದಂಪತಿ ರಸ್ತೆ ಗುಂಡಿ ಮುಚ್ಚುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವುದು ಮತ್ತು ರಸ್ತೆ ಗುಂಡಿಯಿಂದ ಸಂಭವಿಸುತ್ತಿರುವ ಸಾವು-ನೋವು ಕುರಿತು ನಿರಂತರವಾಗಿ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ಮತ್ತು ಶುಕ್ರವಾರ ಬೆಳಗ್ಗೆ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅವರನ್ನು ಕರೆಸಿ ಸಿಎಂ ಬಸವರಾಜ ಬೊಮ್ಮಾಯಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಶುಕ್ರವಾರ ವಿಕಾಸಸೌಧದಲ್ಲಿ ಬಿಬಿಎಂಪಿಯ 8 ವಲಯ ಆಯುಕ್ತರು, ಜಂಟಿ ಆಯುಕ್ತರು ಹಾಗೂ ಎಂಜಿನಿಯರ್‌ಗಳ ಸಭೆ ನಡೆಸಿ ಶನಿವಾರ ಮಧ್ಯಾಹ್ನ 12ರ ಒಳಗಾಗಿ ಕನಿಷ್ಠ ಪಕ್ಷ ಮುಖ್ಯ ರಸ್ತೆಗಳನ್ನು ಗುಂಡಿ ಮುಕ್ತಗೊಳಿಸಬೇಕು ಎಂದು ಗಡುವು ನೀಡಿದ್ದಾರೆ. ಅಲ್ಲದೇ ವಲಯ ಆಯುಕ್ತರು ಶುಕ್ರವಾರ ರಾತ್ರಿ 8ರಿಂದ ಆಯಾ ವಲಯ ಕಚೇರಿಯಲ್ಲಿ ಉಪಸ್ಥಿತರಿದ್ದು, ಎಂಜಿನಿಯರ್‌ಗಳೊಂದಿಗೆ ವಿವಿಧ ರಸ್ತೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಗುಂಡಿ ಮುಚ್ಚುವ ಕಾರ್ಯದ ಬಗ್ಗೆ ಮೇಲ್ವಿಚಾರಣೆ ನಡೆಸಬೇಕು. ನಿರ್ಲಕ್ಷ್ಯ ವಹಿಸಿದರೆ ವಲಯ ಆಯುಕ್ತರ ವಿರುದ್ಧ ಕ್ರಮ ಕೈಗೊಳ್ಳಬೇಕಾಗಲಿದೆ ಎಂದು ರಾಕೇಶ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನ ಐಟಿ-ಬಿಟಿ ವಲಯದಲ್ಲೂ ರಸ್ತೆಗಳು ನೆಟ್ಟಗಿಲ್ಲ..!
ಮೊದಲ ಹಂತದಲ್ಲಿ ಬಿಬಿಎಂಪಿಯ ವ್ಯಾಪ್ತಿಯ 1,300 ಕಿ.ಮೀ. ಉದ್ದದ ಮುಖ್ಯ ರಸ್ತೆಗಳನ್ನು ಗುಂಡಿ ಮುಕ್ತಗೊಳಿಸುವುದರೊಂದಿಗೆ ರಸ್ತೆಯ ಅಕ್ಕ-ಪಕ್ಕದ ಮಳೆ ನೀರು ಕಾಲುವೆಯ ಹೂಳು ತೆಗೆಯಬೇಕು. ಜತೆಗೆ, ಪಾದಚಾರಿ ಮಾರ್ಗವನ್ನು ಸ್ವಚ್ಛವಾಗಿಡಬೇಕೆಂದು ನಿರ್ದೇಶಿಸಿದ್ದಾರೆ.
ರಸ್ತೆ ಗುಂಡಿಗಳ ಸಂಖ್ಯೆ 31 ಸಾವಿರಕ್ಕೇರಿಕೆ!
ಬಿಬಿಎಂಪಿ ವ್ಯಾಪ್ತಿಯ ರಸ್ತೆ ಗುಂಡಿಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ ಒಂದು ವಾರದ ಅಂತರದಲ್ಲಿ ಸುಮರು 5 ಸಾವಿರಕ್ಕೂ ಅಧಿಕ ಹೊಸ ಗುಂಡಿ ಪತ್ತೆಯಾಗುವ ಮೂಲಕ ಒಟ್ಟು ಗುಂಡಿಗಳ ಸಂಖ್ಯೆ 31 ಸಾವಿರಕ್ಕೆ ಏರಿಕೆಯಾಗಿದೆ. ಕಳೆದ ನವೆಂಬರ್ 27ಕ್ಕೆ 25 ಸಾವಿರಕ್ಕೂ ಅಧಿಕ ಗುಂಡಿಗಳು ಪತ್ತೆಯಾ ಗಿದ್ದವು. ನವೆಂಬರ್ 4ರ ವೇಳೆಗೆ 31 ಸಾವಿರಕ್ಕೆ ಏರಿಕೆಯಾಗಿದೆ.
ಬೆಂಗಳೂರಿನ ರಸ್ತೆ ಗುಂಡಿ ವಿವರ
ವಲಯ ಗುಂಡಿ ಸಂಖ್ಯೆ ಮುಚ್ಚಿದ ಗುಂಡಿ ಬಾಕಿ ಗುಂಡಿ