ಬೆಂಗಳೂರಿನಲ್ಲಿ ಇಂದಿನಿಂದ ಮಾಸ್ಕ್ ಕಡ್ಡಾಯ: ಬಿಬಿಎಂಪಿ ಮಾರ್ಷಲ್ಗಳಿಂದ ವಿಶೇಷ ಜಾಗೃತಿ
ಚೀನಾದಲ್ಲಿ ಕೋವಿಡ್ ಹೆಚ್ಚಾದ ಬೆನ್ನಲ್ಲೇ ಬೆಂಗಳೂರಿನಲ್ಲಿ ಇಂದಿನಿಂದ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಬಿಬಿಎಂಪಿ ಮಾರ್ಷಲ್ಗಳಿಂದ ವಿಶೇಷ ಜಾಗೃತಿ ಮೂಡಿಸಲಾಗುತ್ತಿದೆ. ನಗರದ ಜನ ನಿಬಿಡ ಪ್ರದೇಶಗಳಾದ ಮಾರುಕಟ್ಟೆ, ಅವೆನ್ಯೂ ರೋಡ್, ಮಲ್ಲೇಶ್ವರಂ, ಎಂಜಿ ರೋಡ್, ಬ್ರಿಗೇಡ್ ರೋಡ್, ಲಾಲ್ಬಾಗ್ ಸುತ್ತಮುತ್ತ ಕಡ್ಡಾಯವಾಗಿ ಮಾಸ್ಕ್ ಹಾಕಿ, ಬೂಸ್ಟರ್ ಡೋಸ್ ಹಾಕಿಸಿಕೊಳ್ಳಿ ಎಂದು ಅನೌನ್ಸ್ ಮಾಡುವ ಮೂಲಕ ವಿಶೇಷ ಜಾಗೃತಿ ಮೂಡಿಸಲಾಗುತ್ತಿದೆ.