ಬೆಂಗಳೂರಿನಲ್ಲಿ ಇಂದು 'ಕಾಂಗ್ರೆಸ್ ಚುನಾವಣಾ ಸಮಿತಿ'ಯ ಮಹತ್ವದ ಸಭೆ

ಬೆಂಗಳೂರು : ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕಾಂಗ್ರೆಸ್ ಪಾಲಿಗೆ ಸವಾಲಾಗಿ ಪರಿಣಮಿಸಿದ್ದು, ಟಿಕೆಟ್ ಅಂತಿಮಗೊಳಿಸುವ ನಿಟ್ಟಿನಲ್ಲಿ ಇಂದು ಕಾಂಗ್ರೆಸ್ ಮಹತ್ವದ ಸಭೆ ನಡೆಸಲಿದೆ.
ಟಿಕೆಟ್ ನೀಡಲು ಯಾವೆಲ್ಲಾ ಮಾನದಂಡ ವಹಿಸಬೇಕು ಎಂಬುದರ ಬಗ್ಗೆ ಗುರುವಾರ ರಾಜ್ಯ ಚುನಾವಣಾ ಸಮಿತಿ ಸಭೆ ನಡೆಯಲಿದೆ.
224 ಕ್ಷೇತ್ರಗಳಿಗೆ ಈಗಾಗಲೇ 1230 ಅರ್ಜಿಗಳು ಸಲ್ಲಿಕೆಯಾಗಿದ್ದು, ಕೆಲವು ಕ್ಷೇತ್ರಗಳಿಗೆ 20 ರಿಂದ 30 ಅರ್ಜಿಗಳು ಸಲ್ಲಿಕೆಯಾಗಿವೆ. ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕಾಂಗ್ರೆಸ್ ಪಾಲಿಗೆ ಸವಾಲಾಗಿ ಪರಿಣಮಿಸಿದ್ದು, ಟಿಕೆಟ್ ಅಂತಿಮಗೊಳಿಸುವ ನಿಟ್ಟಿನಲ್ಲಿ ಇಂದು ಕಾಂಗ್ರೆಸ್ ಮಹತ್ವದ ಸಭೆ ನಡೆಸಲಿದೆ.