ಬೆಂಗಳೂರಿನಲ್ಲಿ ಕಿಡಿಗೇಡಿಗಳಿಂದ ಭಯಾನಕ ಕೃತ್ಯ; ಮನೆ ಮುಂದೆ ನಿಲ್ಲಿಸಿದ್ದ ಕಾರು, ಬೈಕ್ ಗೆ ಬೆಂಕಿ

ಬೆಂಗಳೂರು: ನಗರದ ಕುರುಬರಹಳ್ಳಿ ಕಾವೇರಿ ನಗರದಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಕಾರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.ತಡರಾತ್ರಿ ದುಷ್ಕರ್ಮಿಗಳು ಕಾರಿಗೆ ಬೆಂಕಿ ಹಚ್ಚಿದ್ದು, ಧಗ ಧಗ ಹೊತ್ತಿ ಉರಿದಿದೆ. ಸುಬ್ರಹ್ಮಣ್ಯ ಎಂಬುವರಿಗೆ ಸೇರಿದ ಕಾರು ಮತ್ತು ಬೈಕ್ಗೆ ಬೆಂಕಿ ಹಚ್ಚಿದ್ದಾರೆ. ಈ ವೇಳೆ ಕಿಡಿಗೇಡಿಗಳು ಸ್ಥಳದಿಂದ ಪಾರಾರಿಯಾಗಿದ್ದಾರೆ.ಬೆಂಕಿ ಹೊತ್ತಿ ಉರಿಯುವಾಗ ಪಕ್ಕದ ಮನೆಗಳಿಗೂ ಹಾನಿಯಾಗಿದ್ದು, ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಎರಡು ಜನ ದುಷ್ಕರ್ಮಿಗಳು ಸೇರಿ ಸುಬ್ರಹ್ಮಣ್ಯ ಅವರ ಟಿಯುವಿ 300(TUV 300) ಕಾರು ಹಾಗೂ ಬೈಕ್ಗೆ ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದೆ.