ಬೆಂಗಳೂರಿನಲ್ಲಿ 'ಕೆಂಪೇಗೌಡ ಏರ್ ಪೋರ್ಟ್ ಟರ್ಮಿನಲ್-2' ಉದ್ಘಾಟಿಸಿದ ಪ್ರಧಾನಿ ಮೋದಿ

ಬೆಂಗಳೂರಿನಲ್ಲಿ 'ಕೆಂಪೇಗೌಡ ಏರ್ ಪೋರ್ಟ್ ಟರ್ಮಿನಲ್-2' ಉದ್ಘಾಟಿಸಿದ ಪ್ರಧಾನಿ ಮೋದಿ

ಬೆಂಗಳೂರು : ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ( Narendra Modi ) ನಗರದ ಕೆಂಪೇಗೌಡ ಏರ್ ಪೋರ್ಟ್ ಟರ್ಮಿನಲ್-2 ಉದ್ಘಾಟಿಸಿದ್ದಾರೆ.

ಹೆಲಿಕಾಪ್ಟರ್ ಮೂಲಕ ಕೆಂಪೇಗೌಡ ಏರ್ ಪೋರ್ಟ್ ಗೆ ತೆರಳಿದ ಮೋದಿ ಲೋಕಾರ್ಪಣೆಗೆ ಸಜ್ಜಾಗಿದ್ದ ಭವ್ಯವಾದ ಕೆಂಪೇಗೌಡ ಏರ್ ಪೋರ್ಟ್ ಟರ್ಮಿನಲ್-2 ಉದ್ಘಾಟಿಸಿದ್ದಾರೆ.

ಇಡೀ ಭಾರತದಲ್ಲೇ ಮುಂಬೈ ಮತ್ತು ದೆಹಲಿಯನ್ನು ಹೊರತುಪಡಿಸಿದರೆ 2ನೇ ಟರ್ಮಿನಲ್ ಹೊಂದಿದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೆಂಬ ಹೆಗ್ಗಳಿಕೆಗೆ ಹಲವು ವಿಶೇಷತೆಗಳಿಂದ ಗಮನ ಸೆಳೆದಿರುವ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪಾತ್ರವಾಗಿದೆ. ಟರ್ಮಿನಲ್ 2ದಲ್ಲಿ ಪ್ರಯಾಣಿಕರು 10,000 ಚದರ ಮೀಟರ್ಗಳಷ್ಟು ಉದ್ದದ ಹಸಿರು ಗೋಡೆಗಳು, ನೇತಾಡುವ ಉದ್ಯಾನಗಳು ಮತ್ತು ಹೊರಾಂಗಣ ಉದ್ಯಾನಗಳ ಮೂಲಕ ಪ್ರಯಾಣಿಸಬಹುದು.