ಬೆಂಗಳೂರಿನಲ್ಲಿ ಖೋಟಾನೋಟು ಮುದ್ರಿಸಿ ಮಾರಾಟ ಮಾಡುತ್ತಿದ್ದ ನಾಲ್ವರು ಅರೆಸ್ಟ್

ಬೆಂಗಳೂರು: ನಗರದಲ್ಲಿ ಖೋಟಾನೋಟು ಮುದ್ರಿಸಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಅಂತಾರಾಜ್ಯ ಆರೋಪಿಗಳನ್ನ ಸುಬ್ರಮಣ್ಯಪುರ ಪೊಲೀಸರು ಬಂಧಿಸಲಿದ್ದಾರೆ.
ಆರೋಪಿಯಿಂದ 11 ಲಕ್ಷ ಮೌಲ್ಯದ ನಕಲಿ ನೋಟುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಆಂಧ್ರಪ್ರದೇಶದ ಕಡಪ ಜಿಲ್ಲೆಯ ಚರಣ್ ಸಿಂಗ್, ಪುಲ್ಲಲರೇವು, ರಾಜ ಹಾಗೂ ಗೋಪಿನಾಥ್ ಬಂಧಿತ ಆರೋಪಿಗಳು.
ಪೂರ್ಣಪ್ರಜ್ಞಾ ಲೇಔಟ್ ಬಳಿ ನಕಲಿ ನೋಟು ಚಲಾವಣೆಗೆ ಯತ್ನಿಸುತ್ತಿದ್ದ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದಾಗ 500 ರೂಪಾಯಿ ಮೌಲ್ಯದ 8 ಕಂತೆಗಳಲ್ಲಿ 818 ನೋಟುಗಳಿರುವ 4 ಲಕ್ಷ ಮೌಲ್ಯದ ನೋಟು ಜಪ್ತಿ ಮಾಡಿದ್ದರು.