ಬೆಂಗಳೂರಿನಲ್ಲಿ ಘೋರ ಘಟನೆ : ಕ್ರಿಕೆಟ್ ಆಡುವಾಗ ಚಾಕುವಿನಿಂದ ಇರಿದು ಇಬ್ಬರ ಹತ್ಯೆ

ಬೆಂಗಳೂರಿನಲ್ಲಿ ಘೋರ ಘಟನೆ : ಕ್ರಿಕೆಟ್ ಆಡುವಾಗ ಚಾಕುವಿನಿಂದ ಇರಿದು ಇಬ್ಬರ ಹತ್ಯೆ

ಬೆಂಗಳೂರು : ಕ್ರಿಕೆಟ್ ಆಡುವಾಗ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡ ಬೆಳವಂಗಳ ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲಿ ಹುಡುಗರು ಕ್ರಿಕೆಟ್ ಆಡುತ್ತಿದ್ದಾಗ ಯಾವುದೋ ವಿಚಾರಕ್ಕೆ ಜಗಳ ನಡೆದಿದೆ.

ನಂತರ ಜಗಳ ವಿಕೋಪಕ್ಕೆ ತಿರುಗಿದ್ದು, ದುಷ್ಕರ್ಮಿಗಳು ಇಬ್ಬರಿಗೆ ಚಾಕು ಇರಿದು ಹತ್ಯೆ ಮಾಡಿದ್ದಾರೆ ನಂತರ ಪರಾರಿಯಾಗಿದ್ದಾರೆ. ಕೊಲೆಯಾದವರನ್ನು ಭರತ್, ಪ್ರತೀಕ್ ಎಂದು ಗುರುತಿಸಲಾಗಿದೆ.

ಘಟನೆ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗುತ್ತಿದೆ. ದೊಡ್ಡ ಬೆಳವಂಗಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.