ಬೆಂಗಳೂರಿನಲ್ಲಿ ನಾಡಧ್ವಜಕ್ಕೆ ಬೆಂಕಿ ಹಚ್ಚಿದ ಸಾಫ್ಟ್‌ವೇರ್ ಇಂಜಿನಿಯರ್ ಅರೆಸ್ಟ್

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್‌ಒಬ್ಬ ನಾಡಧ್ವಜಕ್ಕೆ ಬೆಂಕಿ ಹಚ್ಚಿದ ಘಟನೆ ಬೆಳಕಿಗೆ ಬಂದಿದ್ದು, ಬಂಧಿಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ವಾರಣಾಸಿ ಮೂಲದ 30 ವರ್ಷದ ಅಮೃತೇಶ್ ತಿವಾರಿ ಎಂಬ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು, ಭಾನುವಾರ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ನಾಡ ಧ್ವಜಕ್ಕೆ ಬೆಂಕಿ ಹಚ್ಚಿದ್ದಾರೆ. ಈ ಸಂಬಂಧ ಬಂಧಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ದೆಹಲಿಯ ಐಐಟಿಯಲ್ಲಿ ಓದಿರುವ ತಿವಾರಿ ಕಳೆದ ಎರಡು ತಿಂಗಳಿಂದ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವುದಾಗಿ ಎಂದು ಪೊಲೀಸರಿಗೆ ತಿಳಿಸಿದ್ದಾರೆ.
ಸಾಮಾಜಿಕ ಕಾರ್ಯಕರ್ತ ನವೀನ್ ನರಸಿಂಹ ನೀಡಿರುವ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ. ದೂರಿನಲ್ಲಿ ಪರಂಗಿಪಾಳ್ಯದ 24ನೇ ಮುಖ್ಯಸ್ತೆಯ 22ನೇ ಕ್ರಾಸ್‌ನಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ವ್ಯಕ್ತಿಯೊಬ್ಬರು ಕರ್ನಾಟಕ ಧ್ವಜಕ್ಕೆ ಬೆಂಕಿ ಹಚ್ಚಿರುವುದು ಕಂಡು ಬಂದಿದೆ ಎಂದು ಎಚ್‌ಎಸ್‌ಆರ್ ಲೇಔಟ್ ಪೊಲೀಸರಿಗೆ ನವೀನ್ ನರಸಿಂಹ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತೊಂದು ಉಗ್ರ ಹೋರಾಟಕ್ಕೆ ಕಾರಣವಾಗುವ ಎಲ್ಲ ಸಾಧ್ಯತೆಗಳಿದ್ದು ಮುಂದೆನಾಗುತ್ತೆ ಅನ್ನೋದು ಕಾದು ನೋಡಬೇಕಾಗಿದೆ.