ಬೆಂಗಳೂರಿನಲ್ಲಿ ಪಿಲ್ಲರ್‌ ದುರಂತ ಪ್ರಕರಣ; ಮೃತ ಕುಟುಂಬಕ್ಕೆ10 ಲಕ್ಷ ರೂ. ಪರಿಹಾರ ಘೋಷಣೆ

ಬೆಂಗಳೂರಿನಲ್ಲಿ ಪಿಲ್ಲರ್‌ ದುರಂತ ಪ್ರಕರಣ; ಮೃತ ಕುಟುಂಬಕ್ಕೆ10 ಲಕ್ಷ ರೂ. ಪರಿಹಾರ ಘೋಷಣೆ

ಬೆಂಗಳೂರು: ಇಂದು ಬೆಳಿಗ್ಗೆ ನಾಗವಾರ ರಿಂಗ್ ರೋಡ್ ನ ಎಚ್ ಬಿ ಆರ್ ಲೇಔಟ್ ಬಳಿಯಲ್ಲಿ ಮೆಟ್ರೋ ಪಿಲ್ಲರ್ ದಿಢೀರ್ ಬೈಕ್ ಸವಾರರ ಮೇಲೆ ಬಿದ್ದು,ತಾಯಿ , ಮಗು ಸಾವನ್ನಪ್ಪಿರುವ ಪ್ರಕರಣದಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಪರಿಹಾರವನ್ನು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಸಿಎಂ ಪರಿಹಾರ ನಿಧಿಯಿಂದ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಇದೀಗ ಬಿಎಂಆರ್‌ ಸಿಎಲ್‌ ವತಿಯಿಂದ 10 ಲಕ್ಷ ರೂಪಾಯಿ ನೀಡಿದ್ದಾರೆ. ಈಗಾಗಲೇ 20 ಲಕ್ಷ ಪರಿಹಾರ ನೀಡುವುದಾಗಿ ಬಿಎಂಆರ್‌ಸಿಎಲ್‌ ಎಂಡಿ ಅಜ್ಜುಂ ಪರ್ವೇಜ್ ಘೋಷಿಸಿದರು.

ಇನ್ನು ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಬಿಎಂಆರ್‌ಸಿಎಲ್‌ ಎಂಡಿ ಅಜ್ಜುಂ ಪರ್ವೇಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, 18 ಮೀ. ಎತ್ತರದ ಪಿಲ್ಲರ್ ಬಿದ್ದಿದೆ. ಘಟನೆಯಲ್ಲಿ ತಾಯಿ, ಮಗು ಮೃತಪಟ್ಟಿದೆ. ಈ ಬಗ್ಗೆ ಎಲ್ಲಾ ಎಂಜಿನಿಯರ್ ಜೊತೆಗೆ ಮಾತಾಡುತ್ತೇನೆ. ಇಂಡಿಯನ್ ಇನ್ಸ್ಟಿಟ್ಯೂಟ್ ಸೈನ್ಸ್‌ಗೆ ಮನವಿ ಮಾಡುತ್ತೇವೆ. ಅವರು ಬಂದು ಪರಿಶೀಲನೆ ನಡೆಸುತ್ತಾರೆ. ಜೊತೆಗೆ ಚೀಫ್‌ ಎಂಜಿನಿಯರ್, ಕಂಟ್ರ್ಯಾಕ್ಟರ್ ನೋಟಿಸ್ ಕೊಡುತ್ತೇವೆ ಎಂದು ತಿಳಿಸಿದರು.