ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ : ಕ್ಯಾಂಟರ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸಾವು
ಬೆಂಗಳೂರು : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕ್ಯಾಂಟರ್-ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ಅಂಜನಾನಗರ ಬಸ್ ನಿಲ್ದಾಣದ ಬಳಿ ಬೈಕ್ ಗೆ ಹಿಂಬದಿಯಿಂದ ಬಂದ ಕ್ಯಾಂಟರ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.