ಬೆಂಗಳೂರಿನಲ್ಲಿ 'ಮತದಾರರ ಮಾಹಿತಿ' ಕದ್ದ ಪ್ರಕರಣ : ನಾಲ್ವರು ಪೊಲೀಸ್ ವಶಕ್ಕೆ

ಬೆಂಗಳೂರಿನಲ್ಲಿ 'ಮತದಾರರ ಮಾಹಿತಿ' ಕದ್ದ ಪ್ರಕರಣ : ನಾಲ್ವರು ಪೊಲೀಸ್ ವಶಕ್ಕೆ

ಬೆಂಗಳೂರು : ಮತದಾರರ ಮಾಹಿತಿ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಅಕ್ರಮ ವೋಟರ್ ಐಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಹಲಸೂರು ಗೇಟ್ ಪೊಲೀಸರು ನಾಲ್ವರನ್ನು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ವೋಟರ್ ಐಡಿ ಅಕ್ರಮ ಕುರಿತ ಆರೋಪಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಹಲಸೂರು ಗೇಟ್ ಠಾಣೆಯಲ್ಲಿ ಚಿಲುಮೆ ಸಂಸ್ಥೆ ವಿರುದ್ಧ ಎಫ್ ಐ ಆರ್ (FIR) ದಾಖಲಾಗಿದೆ . ಈ ಕುರಿತು ಬಿಬಿಎಂಪಿ  ಮಾಹಿತಿ ನೀಡಲಾಗಿದ್ದು, ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ದಿ ಸಂಸ್ಥೆ ವಿರುದ್ದ ಹಲಸೂರು ಗೇಟ್ ಪೋಲೀಸ್ ಠಾಣೆ ಮತ್ತು ಕಾಡುಗೋಡಿ ಪೋಲೀಸ್ ಠಾಣೆಗಳಲ್ಲಿ ದೂರು ದಾಖಲಿಸಲಾಗಿದೆ.

ಖಾಸಗಿ ಸಂಸ್ಥೆಯಿಂದ ಮತದಾರ ಮಾಹಿತಿ ಸಂಗ್ರಹ ಆರೋಪದ ಮೇಲೆ ಇದೀಗ ಬಿಬಿಎಂಪಿ ಚಿಲುಮೆ ಸಂಸ್ಥೆ ವಿರುದ್ಧ ತನಿಖೆಗೆ ಮುಂದಾಗಿರುವುದಾಗಿ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಹೇಳಿದ್ದರು. ಚಿಲುಮೆ ಸಂಸ್ಥೆಗೆ ಜಾಗೃತಿ ಮೂಡಿಸೋದಕ್ಕೆ ಅಷ್ಟೇ ನಾವು ಅನುಮತಿ ಕೊಟ್ಟಿದ್ದೇವೆ. ಡೇಟಾ ಕಲೆಕ್ಟ್ ಮಾಡಿ ಅಂತಾ ಅನುಮತಿ ಕೊಟ್ಟಿರಲಿಲ್ಲ. ಆದರೆ ಡೇಟಾ ಕಲೆಕ್ಟ್ ಮಾಡ್ತಾ ಇದ್ದಾರೆ ಅಂತಾ ದೂರು ದಾಖಲಾಗಿತ್ತು ಎಂದು ಹೇಳಿದ್ದರು.