ಬೆಂಗಳೂರಿನಲ್ಲಿ ಮತದಾರರಿಗೆ ಹಂಚುತ್ತಿದ್ದ 29.94 ಲಕ್ಷ ಮೌಲ್ಯದ ಡಿಡಿ ಜಪ್ತಿ
ಬೆಂಗಳೂರು : ಮತದಾರರ ಹೆಸರಿನಲ್ಲಿ ಡಿಡಿಗಳನ್ನು ಹಂಚುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಉದ್ಯಮಿ ಯೂಸುಫ್ ಷರೀಫ್ ಅಲಿಯಾಸ್ ಕೆ.ಜಿ.ಎಫ್ ಬಾಬು ಎಂಬಾತನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, .29.94 ಲಕ್ಷ ರೂ.
1105 ರೂ. ನಂತೆ ಡಿಡಿ ಮಾಡಿಸಿ ಮನೆ ಮನೆಗೆ ಪೋಸ್ಟ್ ಮಾಡಿದ್ದ ಆರೋಪದ ಮೇಲೆ ಉದ್ಯಮಿ ಸೇರಿದಂತೆ ಏಳು ಮಂದಿ ವಿರುದ್ಧ ದೂರು ದಾಖಲಾಗಿದೆ. ಸಿದ್ದಾಪುರ ಠಾಣೆ ಪೊಲೀಸರು ಅಧಿಕಾರಿ ಮತ್ತು ಸಿಬ್ಬಂದಿಗಳು ಒಟ್ಟು 2710 ಡಿಡಿಗಳು, 53 ರೇಷನ್ ಕಾರ್ಡ್ ಹಾಗೂ ಕೃತ್ಯಕ್ಕೆ ಬಳಸಿದ್ದ ಆಟೋ ರಿಕ್ಷಾ ಜಪ್ತಿ ಮಾಡಿದ್ದಾರೆ.
ಸಾಂದರ್ಭಿಕ ಚಿತ್ರ
ಬಿಜೆಪಿ ಅಭ್ಯರ್ಥಿಗಳ ಪಟ್ಟಿ ವಿಚಾರದಲ್ಲಿ ಸುಳ್ಳು ಸುದ್ದಿ- ಅರುಣ್ ಸಿಂಗ್ ಸ್ಪಷ್ಟನೆ
ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವವರ ಪಟ್ಟಿಯನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಈಗ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಸುಳ್ಳು ಸುದ್ದಿ ಪ್ರಕಟಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ಸ್ಪಷ್ಟಪಡಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ವಾಟ್ಸಪ್ಗಳಲ್ಲಿ ತಪ್ಪು ಮಾಹಿತಿ ಹರಿದಾಡುತ್ತಿದೆ. ಸುಳ್ಳು ಸುದ್ದಿ ಪ್ರಕಟಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.ಸೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವಂತ 100 ಅಭ್ಯರ್ಥಿಗಳ ಬಿಜೆಪಿ ಮೊದಲ ಪಟ್ಟಿ ಫೇಕ್ ( Fake ). ಅದು ನಕಲಿಯಾಗಿದ್ದು. ನಿಜವಾದ ಲೀಸ್ಟ್ ಅಧಿಕೃತವಾಗಿ ಬಿಜೆಪಿಯಿಂದ ಏಪ್ರಿಲ್ 8ರಂದು ಇಲ್ಲವೇ ಆನಂತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ. ಅಲ್ಲಿಯವರೆಗೆ ಕಾದು ನೋಡಿ.