ಬೆಂಗಳೂರಿನಲ್ಲಿ ಮತ್ತೊಂದು ಅಪರಿಚಿತ ವ್ಯಕ್ತಿಯ ಶವ ಪತ್ತೆ; ಆತಂಕದಲ್ಲಿ ಸ್ಥಳೀಯರು
ಬೆಂಗಳೂರು: ನಗರದಲ್ಲಿ ಅಪರಿಚಿತ ಶವಗಳ ಪತ್ತೆ ಹೆಚ್ಚಾಗುತ್ತಲೇ ಇದೆ. ಇದೀಗ ಬೆಂಗಳೂರಿನಲ್ಲಿ ಮೊತ್ತೊಂದು ಅಪರಿಚಿತನ ಶವ ಪತ್ತೆಯಾಗಿದೆ.
ನಗರದ ಕೊಡಿಗೆಹಳ್ಳಿ ಠಾಣಾ ವ್ಯಾಪ್ತಿಯ ದೇವಿನಗರದಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.
ಇನ್ನು ಸ್ಥಳದಲ್ಲಿ ಗುಜರಿ ವಾಹನಗಳನ್ನು ನಿಲ್ಲಿಸಲಾಗುತ್ತಿತ್ತು. ಅದರ ಪಕ್ಕದಲ್ಲೇ ಮೊತ್ತೊಂದು ಹಳೆಯ ಕಾರು ಕೂಡ ನಿಲ್ಲಿಸಲಾಗಿತ್ತು. ಈ ವೇಳೆ ಕಾರಿನಲ್ಲಿ ಅಪರಿಚಿತ ವ್ಯಕ್ತಿ ರಾತ್ರಿ ಮಲಗಿದ್ದನು. ಈ ವೇಳೆ ಕಾರಿಗೆ ಬೆಂಕಿ ಹಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಕಾರು ಅರೆಬರೆ ಸುಟ್ಟು ಹೋಗಿದ್ದು, ಅದರಲ್ಲಿದ್ದ ವ್ಯಕ್ತಿ ಸಜೀವ ದಹನ ಆಗಿದ್ದಾನೆ ಎಂದು ಹೇಳಲಾಗಿದೆ. ಈ ಘಟನೆ ಸಂಬಂಧ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರಿನಲ್ಲಿ ಬುದ್ದಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ
ಮೈಸೂರು: ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ದಿನದಿಂದ ಹೆಚ್ಚಾಗುತ್ತಿದೆ. ಇದೀಗ ಮೈಸೂರಿನಲ್ಲಿ ಬುದ್ದಿ ಮಾಂದ್ಯ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಲಾಗಿದೆ. ಹೀಗಾಗಿ ಆರೋಪಿಯನ್ನು ಗ್ರಾಮಸ್ಥರು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಮೈಸೂರಿನ ಹುಣಸೂರು ಗ್ರಾಮದಲ್ಲಿ ನಡೆದಿದೆ. 57 ವರ್ಷದ ಮಹದೇವ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ. ಆತ ಬುದ್ದಿಮಾಂದ್ಯ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಬಾಲಕಿ ಕೂಗಿದ್ದಾಳೆ.ಕೂಗಾಟದ ಶಬ್ಧ ಕೇಳಿ ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿದ್ದಾರೆ. ನಂತರ ಆರೋಪಿಯನ್ನು ಕಂಬಕ್ಕೆ ಕಟ್ಟಿ ಗ್ರಾಮಸ್ಥರು ಥಳಿಸಿದ್ದಾರೆ.ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಹುಣಸೂರು ಠಾಣಾ ಪೊಲೀಸರು ಆರೋಪಿ ಮಹದೇವನನ್ನು ವಶಕ್ಕೆ ಪಡೆದಿದ್ದಾರೆ. ಆದರೆ ಮಹದೇವ ಅಷ್ಟೊತ್ತಿಗಾಗಲೇ ಅಸ್ವಸ್ಥನಾಗಿದ್ದ ಎಂದು ತಿಳಿದುಬಂದಿದೆ. ಈ ಹಿನ್ನೆಲೆ ಆತನನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.