ಬೆಂಗಳೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಕ್ಯಾಂಟರ್-ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಕ್ಯಾಂಟರ್-ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಬವಿಸಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಶೆಟ್ಟರಹಳ್ಳಿ ಬಳಿ ಕ್ಯಾಂಟರ್-ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ದೇವನಹಳ್ಳಿ ಮೂಲದವರಾಗಿದ್ದು, ರಾಕೇಶ್ (22), ಪ್ರತಾಪ್ (28) ಮೃತಪಟ್ಟ ಬೈಕ್ ಸವಾರರು ಎಂದು ಗುರುತಿಸಲಾಗಿದೆ. ದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.