ಬೆಂಗಳೂರಿನಲ್ಲಿ ಮತ್ತೊಂದು ಮೆಟ್ರೋ ಅವಘಡ: ಕಾರಿನ ಮೇಲೆ ಬಿದ್ದ ಬ್ಯಾರಿಕೇಡ್!
ಹೊಸದಿಗಂತ ಡಿಜಿಟಲ್ ಡೆಸ್ಕ್ :
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ಮೆಟ್ರೋ ಅಪಘಾತ ಸಂಭವಿಸಿದ್ದು, ಕಾರಿನ ಮೇಲೆ ಮೆಟ್ರೋ ಬ್ಯಾರಿಕೇಡ್ ಬಿದ್ದಿದೆ.
ಬೆಂಗಳೂರಿನ ದೊಡ್ಡನೆಕ್ಕುಂದಿ ಜಂಕ್ಷನ್ನಲ್ಲಿ ಮೆಟ್ರೊ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ನಿಲ್ಲಿಸಿದ್ದ ಬ್ಯಾರಿಕೇಡ್ ಕಾರಿನ ಮೇಲೆ ಬಿದ್ದಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.
ದೊಡ್ಡನೆಕ್ಕುಂದಿಯಿಂದ ಮಹದೇವಪುರ ಕಡೆಗೆ ಇಬ್ಬರು ಸ್ಥಳೀಯ ನಿವಾಸಿಗಳು ತಮ್ಮ ಹುಂಡೈ ಐ-10 ಕಾರಿನಲ್ಲಿ ಹೊರಟಿದ್ದರು. ಕಾರು ಚಲಿಸುತ್ತಿದ್ದ ಸಂದರ್ಭದಲ್ಲೇ ಬ್ಯಾರಿಕೇಡ್ ಬಿದ್ದಿತ್ತು. ಸ್ವಲ್ಪದರಲ್ಲೇ ಕಾರು ಮುಂದಕ್ಕೆ ಚಲಿಸಿದ್ದರಿಂದ, ಕಾರು ಭಾಗಶಃ ಜಖಂಗೊಂಡಿದೆ