ಬೆಂಗಳೂರಿನಲ್ಲಿ ಮನೆಗೆ ನುಗ್ಗಿದ ಕಳ್ಳನ ಮೇಲೆ ಗುಂಡಿನ ದಾಳಿ
ಬೆಂಗಳೂರು : ಬೆಂಗಳೂರಿನಲ್ಲಿ ಮನೆಗೆ ನುಗ್ಗಿದ ಕಳ್ಳನ ಮೇಲೆ ಮನೆ ಮಾಲೀಕ ಗುಂಡಿನ ದಾಳಿ ನಡೆಸಿದ ಘಟನೆ ತಡರಾತ್ರಿ ನಡೆದಿದೆ.
ಬೆಂಗಳೂರಿನಲ್ಲಿ ಮನೆಯೊಂದರಲ್ಲಿ ಕಳ್ಳತನಕ್ಕೆ ಬಂದ ಕಳ್ಳನ ಮೇಲೆ ಮನೆ ಮಾಲೀಕ ಗುಂಡು ಹಾರಿಸಿದ್ದು, ಗಂಭೀರವಾಗಿ ಗಾಯಗೊಂಡಿರುವ ಕಳ್ಳನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಾಗಲಕೋಟೆ ಮೂಲದ ಲಕ್ಷಣ್ ಎಂಬಾತನಿಗೆ ಗುಂಡೇಟು ಬಿದ್ದಿದ್ದು, ನಿನ್ನೆ ರಾತ್ರಿ 2:30 ರ ವೇಳೆಗೆ ಘಟನೆ ನಡೆದಿದೆ. ಗಾಯಾಳು ಕಳ್ಳನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.