ಬೆಂಗಳೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ಬೆಚ್ಚಿಬಿದ್ದ ಸಿಲಿಕಾನ್ ಸಿಟಿ

ಬೆಂಗಳೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ಬೆಚ್ಚಿಬಿದ್ದ ಸಿಲಿಕಾನ್ ಸಿಟಿ

ಬೆಂಗಳೂರು : ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ನಡೆದಿದ್ದು, ಕಾರಿನಲ್ಲೇ ಯುವತಿ ಮೇಲೆ ದುರುಳರು ಗ್ಯಾಂಗ್ ರೇಪ್ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಪಾರ್ಕ್ ನಲ್ಲಿ ಕುಳಿತಿದ್ದ ಯುವತಿಯನ್ನು ಹೊತ್ತೊಯ್ದ ದುರುಳರು ನಂತರ ಚಲಿಸುತ್ತಿದ್ದ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಮಾರ್ಚ್ 25 ರಂದು ರಾತ್ರಿ 10 ಗಂಟೆಗೆ ಘಟನೆ ನಡೆದಿದ್ದು, ಆದರೆ ತಡವಾಗಿ ಬೆಳಕಿಗೆ ಬಂದಿದೆ. ದುರುಳರ ಪೈಶಾಚಿಕ ಕೃತ್ಯಕ್ಕೆ ಇಡೀ ರಾಜ್ಯವೇ ಬೆಚ್ಚಿಬಿದ್ದಿದೆ.

ಸ್ನೇಹಿತನ ಜೊತೆ ಪಾರ್ಕ್ ನಲ್ಲಿ ಕುಳಿತಿದ್ದ ಯುವತಿಯ ಬಳಿ ಬಂದು ಗಲಾಟೆ ಮಾಡಿದ ದುರುಳರು ಸ್ನೇಹಿತನನ್ನು ಬೆದರಿಸಿ ಯುವತಿಯನ್ನು ಎಳೆದುಕೊಂಡು ಹೋಗಿದ್ದಾರೆ. ನಂತರ ಕಾರ್ ನಲ್ಲಿ ಎಲ್ಲಾ ಅನೇಕಲ್, ನೈಸ್ ರಸ್ತೆ, ಇಂದಿರಾ ನಗರ ಸೇರಿದಂತೆ ಹಲವು ಕಡೆ ಸುತ್ತಾಟ ನಡೆಸಿ ಅತ್ಯಾಚಾರ ನಡೆಸಿ ಮಾರ್ಚ್ 26 ರಂದು ಬೆಳಗ್ಗೆ 4 ಗಂಟೆಗೆ ಯುವತಿಯನ್ನು ಮನೆ ಬಳಿ ಬಿಟ್ಟು ಪರಾರಿಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಸಾಂದರ್ಭಿಕ ಚಿತ್ರ

ಯಾದಗಿರಿಯಲ್ಲಿ ಶೋಭಾಯಾತ್ರೆ ವೇಳೆ 2 ಗುಂಪುಗಳ ನಡುವೆ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್

ಯಾದಗಿರಿ : ರಾಮನವಮಿಯ ಶೋಭಾಯಾತ್ರೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು, ಪೊಲೀಸರು ಲಾಠಿಚಾರ್ಜ್ ನಡೆಸಿದ ಘಟನೆ ಯಾದಗಿರಿ ಜಿಲ್ಲೆ ಸುರಪುರದಲ್ಲಿ ನಡೆದಿದೆ.ನಿನ್ನೆ ನಡೆದ ರಾಮನವಮಿಯ ಶೋಭಾಯಾತ್ರೆ ವೇಳೆ ವೈಯಕ್ತಿಕ ವಿಚಾರಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿ ಚಾರ್ಜ್ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ಅಪ್ ಡೇಟ್ ಆಗಲಿದೆ.

ಆಯುಷ್ಮಾನ್' ಆರೋಗ್ಯ ಕಾರ್ಡ್ ವಿತರಣೆ ಸ್ಥಗಿತ : ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ( Karnataka Assembly Election 2023 ) ದಿನಾಂಕವನ್ನು ಘೋಷಣೆ ಮಾಡಲಾಗಿದೆ. ಮೇ.10ರಂದು ಮತದಾನ, ಮೇ.13ರಂದು ಫಲಿತಾಂಶ ಹೊರಬೀಳಲಿದೆ. ಈ ಹಿನ್ನಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಗುರುತಿನ ಚೀಟಿ ( Arogya Karnataka ID Card ) ವಿತರಣೆಯನ್ನು ರದ್ದುಗೊಳಿಸಲಾಗಿದೆ.ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಆಯುಕ್ತರಾದಂತ ರಂದೀಪ್ ಡಿ ಅವರು ತುರ್ತು ಸುತ್ತೋಲೆ ಹೊರಡಿಸಿದ್ದು, 2023ರ ಮೇ ತಿಂಗಳಿನಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ( Assembly Election 2023 ) ನಡೆಯಲಿದೆ. ಈ ಹಿನ್ನಲೆಯಲ್ಲಿ ರಾಜ್ಯಾಧ್ಯಂತ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ ಎಂದು ತಿಳಿಸಿದ್ದಾರೆ.

ಚುನಾವಣಾ ನೀತಿ ಸಂಹಿತೆಯ ಕಾರಣ ಆಯುಷ್ಮಾನ್ ಭಾರತ್ -ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ, ಆರೋಗ್ಯ ಕರ್ನಾಟಕ ( AB-PMJAY-Ark ) ಗುರುತಿನ ಚೀಟಿಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡುವ ಪ್ರಕ್ರಿಯೆ ಸೇರಿದಂತೆ, ಗುರುತಿನ ಚೀಟಿಗೆ ಸಂಬಂಧಿತ ಎಲ್ಲಾ ಚಟುವಟಿಕೆಗಳನ್ನು ದಿನಾಂಕ 29-03-2023ರಿಂದ ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಿ ಆದೇಶಿಸಿದ್ದಾರೆ.