ಬೆಂಗಳೂರಿನಲ್ಲಿ ರಸ್ತೆ ಗುಂಡಿ ಸರಿಪಡಿಸಯವಂತೆ ಆಗ್ರಹಿಸಿ ಪ್ರತಿಭಟನೆ; ಕಾಂಗ್ರೆಸ್‌ ಕಾರ್ಯಕರ್ತರು ಪೊಲೀಸರ ವಶಕ್ಕೆ

ಬೆಂಗಳೂರಿನಲ್ಲಿ ರಸ್ತೆ ಗುಂಡಿ ಸರಿಪಡಿಸಯವಂತೆ ಆಗ್ರಹಿಸಿ ಪ್ರತಿಭಟನೆ; ಕಾಂಗ್ರೆಸ್‌ ಕಾರ್ಯಕರ್ತರು ಪೊಲೀಸರ ವಶಕ್ಕೆ

ಬೆಂಗಳೂರು: ನಗರದಲ್ಲಿ ರಸ್ತೆಗಳು ಸಾಕಷ್ಟು ಹಾಳಾಗಿದೆ. ಎಲ್ಲೆಂದರಲ್ಲಿ ಗುಂಡಿಗಳೇ ಎದ್ದು ಕಾಣುತ್ತಿದೆ. ಇದರಿಂದ ಸಾಕಷ್ಟು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಶೀಘ್ರವೇ ಎಲ್ಲ ಗುಂಡಿಗಳನ್ನು ಮುಚ್ಚಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ ನಡೆಸಿದೆ. ಕಾಂಗ್ರೆಸ್‌ ಭವನದಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಹೊರಟ ಮಾರ್ಗ ಮಧ್ಯದಲ್ಲಿ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.