ಬೆಂಗಳೂರಿನಲ್ಲಿ ರೈಸ್ ಪುಲ್ಲಿಂಗ್ ದಂಧೆ ಪ್ರಕರಣ : ಮತ್ತಿಬ್ಬರು ಪೊಲೀಸ್ ಸಿಬ್ಬಂದಿ ಅಮಾನತು
ಬೆಂಗಳೂರು : ಬೆಂಗಳೂರಿನ ಪುಲಿಕೇಶಿ ನಗರದಲ್ಲಿ ರೈಸ್ ಪುಲ್ಲಿಂಗ್ ದಂಧೆ ಪ್ರಕರಣ ಸಂಬಂಧ ಮತ್ತೆ ಇಬ್ಬರು ಪೊಒಲೀಸ್ ಕಾನ್ಸ್ ಟೇಬಲ್ ಗಳನ್ನು ಅಮಾನತು ಮಾಡಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನ ಪುಲಕೇಶಿನಗರದಲ್ಲಿ ರೈಸ್ ಫುಲ್ಲಿಂಗ್ ದಂಧೆ ಪ್ರಕರಣದಲ್ಲಿ ಈ ಹಿಂದೆ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿತ್ತು.
ರೈಸ್ ಪುಲ್ಲಿಂಗ್ ಅಕ್ರಮದಲ್ಲಿ ಭಾಗಿಯಾಗಿದ್ದ ಕಾನ್ಸ್ ಟೇಬಲ್ ನಸ್ರುಲ್ಲಾ, ಸನಾವುಲ್ಲಾ ಅಮಾನತು ಮಾಡಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.