ಬೆಂಗಳೂರಿನಲ್ಲಿ ಹೀನ ಕೃತ್ಯ : 3 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರವೆಸಗಿ ಕೊಲೆ

ಬೆಂಗಳೂರಿನಲ್ಲಿ ಹೀನ ಕೃತ್ಯ : 3 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರವೆಸಗಿ ಕೊಲೆ

ಬೆಂಗಳೂರು : ಬೆಂಗಳೂರಿನಲ್ಲಿ 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ( Rape and Murder) ಮಾಡಿದ ಘಟನೆ ವರದಿಯಾಗಿದೆ.

ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಪರಿಚಯಸ್ಥನಿಂದಲೇ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ನಡೆದಿದ್ದು, 22 ವರ್ಷದ ಯುವಕ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಈ ಸಂಬಂಧ ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಆರೋಪಿಯ ಪತ್ತೆಗೆ ಪೊಲೀಸರು ಮುಂದಾಗಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಸಾಂದರ್ಭಿಕ ಚಿತ್ರ