ಬೆಂಗಳೂರಿನಲ್ಲಿ ಹೊಯ್ಸಳ ಪೊಲೀಸರ ವಿರುದ್ಧ ಸುಲಿಗೆ ಆರೋಪ; ಇಬ್ಬರು ಪೊಲೀಸ್‌ ಸಿಬ್ಬಂದಿ ಅಮಾನತು

ಬೆಂಗಳೂರಿನಲ್ಲಿ ಹೊಯ್ಸಳ ಪೊಲೀಸರ ವಿರುದ್ಧ ಸುಲಿಗೆ ಆರೋಪ; ಇಬ್ಬರು ಪೊಲೀಸ್‌ ಸಿಬ್ಬಂದಿ ಅಮಾನತು

ಬೆಂಗಳೂರು: ನಗರದಲ್ಲಿ ಹೊಯ್ಸಳ ಪೊಲೀಸರ ವಿರುದ್ಧ ಸುಲಿಗೆ ಆರೋಪಕ್ಕೆ ಸಂಬಂಧಿಸಿದಂತೆ ಸಂಪಿಗೆಹಳ್ಳಿ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿದೆ.

ಈ ಬಗ್ಗೆ ಈಶಾನ್ಯ ವಿಭಾಗ ಪೊಲೀಸರು ಪ್ರತಿಕ್ರಿಯೆ ನೀಡಿ, ಸುಲಿಗೆ ಸಂಬಂಧ ಡಿಸೆಂಬರ್ 8ರಂದು ಸಂತ್ರಸ್ತರು ಟ್ವೀಟರ್ ಮೂಲಕ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದರು. 1000 ಹಣವನ್ನು ಸಂತ್ರಸ್ಥರಿಂದ ಕ್ಯೂ ಆರ್ ಕೋಡ್ ಮೂಲಕ ಪಡೆದಿದ್ದಾರೆ. ಹೀಗಾಗಿ ಸಂಪಿಗೆ ಹಳ್ಳಿ ಠಾಣೆಯ ರಾಜೇಶ್ ಹೆಚ್ ಸಿ, ಪಿಸಿ ನಾಗೇಶ್ ಎಂಬವರನ್ನು ಅಮಾನತು ಮಾಡಿ ಘಟನೆಗೆ ಸಂಬಂದಿಸಿದಂತೆ ಇಲಾಖೆ ತನಿಖೆಗೆ ಆದೇಶಿಸಲಾಗಿದೆ.

ರಾತ್ರಿ ವೇಳೆ ಅನವಶ್ಯಕವಾಗಿ ತಿರುಗಾಡ್ತಿದ್ದೀರಿ ಎಂದು ದಂಡ ವಿಧಿಸುತ್ತಿರುವುದಾಗಿ ಹೇಳಿ ಹಣ ವಸೂಲಿ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ನಗರದ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಾನ್ಯತಾ ಟೆಕ್​ಪಾರ್ಕ್​ ಬಳಿ ಕಾರ್ತಿಕ್ ಪೆತ್ರಿ ಮತ್ತು ಅವರ ಪತ್ನಿ ಸ್ನೇಹಿತರ ಜೊತೆ ಪಾರ್ಟಿ ಮುಗಿಸಿ ಮಧ್ಯರಾತ್ರಿ ವಾಪಸ್ ಆಗುತ್ತಿದ್ದರು.