ಬೆಂಗಳೂರಿನಲ್ಲಿ1 ಕೋಟಿ 47 ಲಕ್ಷ ಮೌಲ್ಯದ ಚಿನ್ನ ಲೇಪಿತ ಆಭರಣ ಜಪ್ತಿ

ಬೆಂಗಳೂರು : ರಾಜ್ಯದಲ್ಲಿ ಚುನಾವಣೆ ಹೊತ್ತಲ್ಲಿ ಪೊಲೀಸರ ಬೇಟೆ ಮುಂದುವರೆದಿದ್ದು, ಚಿನ್ನ ಲೇಪಿತ 1 ಕೋಟಿ 47 ಲಕ್ಷ ಮೌಲ್ಯದ ಆಭರಣಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.
ಹಲಸೂರು ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ 1 ಕೋಟಿ 47 ಲಕ್ಷ ರೂ ಮೌಲ್ಯದ ಆಭರಣಗಳನ್ನು ಜಪ್ತಿ ಮಾಡಿದ್ದಾರೆ.
ಎಸಿಪಿ ರಾಮಚಂದ್ರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದು, ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ರಾಯಚೂರಿನ ಗಬ್ಬೂರು ಚೆಕ್ಪೋಸ್ಟ್ನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ ದಾಖಲೆ ಇಲ್ಲದ 20 ಲಕ್ಷ ಹಣ ಜಪ್ತಿ
ರಾಯಚೂರು : ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಮೇ10 ರಂದು ಮತದಾನ ನಡೆಯಲಿದೆ. ಇದೀಗ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದೆ. ಈಗಾಗಲೇ ಮೂರು ಪಕ್ಷದ ನಾಯಕರು ಪ್ರಚಾರದಲ್ಲಿ ಕೈಗೊಂಡಿದ್ದಾರೆ.
ಇದೀಗ ರಾಜ್ಯದಲ್ಲಿ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಹೀಗಾಗಿ ಬಹುತೇಕ ಜಿಲ್ಲೆಗಳಲ್ಲಿ ಚೆಕ್ ಪೋಸ್ಟ್ ತೆರೆಯಲಾಗಿದೆ. ಈ ವೇಳೆ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಅದರಂತೆ ಇದೀಗ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ಬೆಳ್ಳಿ, ಮದ್ಯ ವಶಕ್ಕೆ ಪಡೆಯಲಾಗಿದೆ.
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿಮ ಗಬ್ಬೂರು ತಪಾಸಣೆ ವೇಳೆ ಕಾರಿನಲ್ಲಿ 20 ಲಕ್ಷ ರೂಪಾಯಿ ಹಣವನ್ನು ಜಪ್ತಿ ಮಾಡಲಾಗಿದೆ. ಕಾಟನ್ ಮಿಲ್ ಮಾಲೀಕ ರಾಹುಲ್ ವಶಕ್ಕೆ ಪಡೆಯಲಾಗಿದೆ. ಸೂಕ್ತ ದಾಖಲೆಗಳನ್ನು ತೋರಿಸಿದಕ್ಕೆ ಮಾಲೀಕ ರಾಹುಲ್ ಬಿಡುಗಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.