ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಾಪ್ತವಾಗಲಿದೆ ಮತ್ತೊಂದು ಹೆಗ್ಗಳಿಕೆ

ಬೆಂಗಳೂರು: ಹಲವು ವಿಶಿಷ್ಟತೆಗಳಿಂದ ಅಂತಾರಾಷ್ಟ್ರೀಯ ಗಮನ ಸೆಳೆದಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೊಂದು ಮುಕುಟ ಪ್ರಾಪ್ತವಾಗಲಿದೆ. ದೇಶದಲ್ಲೇ ದೆಹಲಿ ಮತ್ತು ಮುಂಬೈ ಹೊರತುಪಡಿಸಿದರೆ 2ನೇ ಟರ್ಮಿನಲ್ ಹೊಂದಿದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ರಾಜ್ಯದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪಾತ್ರವಾಗಲಿದೆ.
ಇದರಿಂದ ಇನ್ನುಮುಂದೆ ವಿಮಾನ ನಿಲ್ದಾಣಕ್ಕೆ ದೇಶ-ವಿದೇಶಗಳಿಂದ ಬಂದುಹೋಗುವ ವಿಮಾನಗಳು ಮತ್ತು ಪ್ರಯಾಣಿಕರ ಸಂಖ್ಯೆ ದುಪ್ಪಟ್ಟಾಗಲಿದೆ. ಟರ್ಮಿನಲ್-2ನ್ನು ಗಾರ್ಡನ್ ಟರ್ಮಿನಲ್ ಎಂದು ಬಿಲ್ ಮಾಡಲಾಗಿದೆ. ಉದ್ಯಾನ ನಗರಿ ಬೆಂಗಳೂರಿನ ಅಭಿವೃದ್ಧಿ ನೀತಿಯನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ವಿಶೇಷವಾಗಿ ಟರ್ಮಿನಲ್ ಅನ್ನು ವಿನ್ಯಾಸಗೊಳಿಸಲಾಗಿದೆ. ಒಟ್ಟು 13,000 ಕೋಟಿ ರೂ. ವೆಚ್ಚದಲ್ಲಿ 2.55 ಲಕ್ಷ ಚದರ ಮೀ. ಟರ್ಮಿನಲ್-2 ನಿರ್ಮಾಣ ನಡೆಯುತ್ತಿದೆ. ಪ್ರತಿ ಗಂಟೆಗೆ 90 ವಿಮಾನಗಳ ಸಂಚಾರದೊಂದಿಗೆ ವಾರ್ಷಿಕ 3.6 ಕೋಟಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ರೂಪುಗೊಳ್ಳುತ್ತಿದೆ.