ಬೆಂಗಳೂರು ಗ್ರಾಮಾಂತರದಲ್ಲಿ ʼದಾಖಲೆಯಿಲ್ಲದ 20 ಲಕ್ಷ ನಗದು, 48 ಕೆಜಿ ಬೆಳ್ಳಿ ವಶಕ್ಕೆʼ
ಬೆಂಗಳೂರು ಗ್ರಾಮಾಂತರ : ಮುಂದಿನ ವಿಧಾನ ಸಭಾ ಚುನಾವಣೆಗೆ ಮತದಾರರ ಸೆಳೆಯೋದಕ್ಕೆ ರಾಜ್ಯದೆಲ್ಲೆಡೆ ಭರ್ಜರಿ ರಣತಂತ್ರ ರೂಪಿಸುತ್ತಿದ್ದು, ಈ ನಿಟ್ಟಿನಲ್ಲಿ ಗಿಫ್ಟ್ ಪಾಲಿಟಿಕ್ಸ್ ಎಲ್ಲೆಡೆ ನಡೆಸುತ್ತಿರೋದು ಪತ್ತೆಯಾಗುತ್ತಿದೆ.
ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗಾಗಿ ಕಟ್ಟೆಚ್ಚರ ವಹಿಸಲಾಗುತ್ತಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದಾಖಲೆ ರಹಿತವಾಗಿ ಸಾಗಿಸುತ್ತಿದ್ದ 20 ಲಕ್ಷ ರೂ. ನಗದು, ಸುಮಾರು 20 ಲಕ್ಷಕ್ಕೂ ಅಧಿಕ ಮೌಲ್ಯದ 48 ಕೆ.ಜಿ. ಬೆಳ್ಳಿ, ವಿವಿಧ ಉಡುಪು, ಬಟ್ಟೆಗಳು ಸೇರಿ ಸುಮಾರು 42,83,320 ರೂ. ಮೌಲ್ಯದ ವಸ್ತುಗಳನ್ನು ಸಾಗಿಸುತ್ತಿರೋ ಪತ್ತೆಯಾಗಿದೆ.
ನೆಲಮಂಗಲ ತಾಲೂಕು ವ್ಯಾಪ್ತಿಯಲ್ಲಿ ಶುಕ್ರವಾರ ಪೊಲೀಸರು ಭರ್ಜರಿಯಾಗಿ ಕಾರ್ಯಚರಣೆಯಲ್ಲಿ ತೊಡಗಿದ್ದು ದಾಖಲೆ ರಹಿತ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಜಿಲ್ಲಾ ಚುನಾವಣಾಧಿಕಾರಿಗಳಾದ, ಜಿಲ್ಲಾಧಿಕಾರಿ ಆರ್. ಲತಾತಿಳಿಸಿದ್ದಾರೆ. ಈವರೆಗೆ 1,66,980 ರೂ. ಮೌಲ್ಯದ 347 ಲೀಟರ್ ಅಕ್ರಮ ಮದ್ಯ, 3 ಲಕ್ಷ ರೂ.ಗಳಿಗೂ ಅಧಿಕ ಮೌಲ್ಯದ 13 ಸಾವಿರ ಗ್ರಾಂ ಡ್ರಗ್ಸ್ ಹಾಗೂ 3 ಲಕ್ಷಕ್ಕೂ ಅಧಿಕ ಮೌಲ್ಯದ 536 ಕುಕ್ಕರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನೂ ಎರಡು ಕಾರುಗಳಲ್ಲಿ ಸೂಕ್ತ ದಾಖಲೆಗಳಿಲ್ಲದೇ ಸಾಗಣೆ ಮಾಡುತ್ತಿದ್ದ 20 ಲಕ್ಷ ರೂ.ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ .