ಬೆಂಗಳೂರು ನಗರವು ಪ್ರಕೃತಿಯೊಂದಿಗೆ ಗಾಢವಾದ ಬಾಂಧವ್ಯ ಹೊಂದಿದೆ : ಕನ್ನಡದಲ್ಲೇ ʻ ಪ್ರಧಾನಿ ಮೋದಿ ಶ್ಲಾಘನೆ

ಬೆಂಗಳೂರು ನಗರವು ಪ್ರಕೃತಿಯೊಂದಿಗೆ ಗಾಢವಾದ ಬಾಂಧವ್ಯ ಹೊಂದಿದೆ : ಕನ್ನಡದಲ್ಲೇ ʻ ಪ್ರಧಾನಿ ಮೋದಿ ಶ್ಲಾಘನೆ

ವದೆಹಲಿ : ಮುಂದಿನ ವಿಧಾನ ಸಭೆ ಚುನಾವಣೆ ಹಿನ್ನೆಲೆ ಬೆಂಗಳೂರು & ಕರ್ನಾಟಕದ ಮೇಲಿನ ಪ್ರಧಾನಿ ಮೋದಿ ಪ್ರೀತಿ ಹೆಚ್ಚಾಗಿದ್ದು, ಇದೀಗ ಬೆಂಗಳೂರಿನ ಪ್ರಕೃತಿ ಸೌಂದರ್ಯದ ಬಗ್ಗೆ ಟ್ವೀಟ್‌ ಮೂಲಕ 'ಕನ್ನಡದಲ್ಲೇ ಪ್ರಧಾನಿ ಮೋದಿ' ಶ್ಲಾಘಿಸಿದ್ದಾರೆ.ಬೆಂಗಳೂರಿನಲ್ಲಿ ವರ್ಷವಿಡೀ ಅರಳುವ ವೈವಿಧ್ಯಮಯ ಮರಗಳ ಸಂಗ್ರಹವಿದೆ ಎಂದು ನಿಮಗೆ ತಿಳಿದಿದೆಯೇ? ವರ್ಷಗಳ ಹಿಂದೆ ನಗರವನ್ನು ಯೋಜಿಸಿದಾಗ, ಒಂದು ಮರವು ಅರಳುವುದನ್ನು ನಿಲ್ಲಿಸಿದಾಗ, ಮತ್ತೊಂದು ಮರವು ಅರಳುವ ರೀತಿಯಲ್ಲಿ ಮರಗಳು ಇರುವಂತೆ ಗಿಡಗಳನ್ನು ನೆಟ್ಟು ಬೆಳೆಸಲಾಗಿತ್ತು. ಬೆಂಗಳೂರು ಕೆಲ ಋತುಗಳಲ್ಲಿ ಹೂವಿನ ಸ್ವರಮೇಳವಾಗಿ ಹೊರಹೊಮ್ಮಿದೆ. ಪರಿಸರಪ್ರಿಯೆ, ಕಲಾವಿದೆ, ಪರಿಸರ ಕುರಿತ ವಿಚಾರಗಳ ಅಂಕಣಕಾರ್ತಿಯೂ ಆಗಿರುವ ಸುಭಾಷಿಣಿ ಚಂದ್ರಮಣಿ ಎಂಬವರು ಟ್ವೀಟ್ ಮೂಲಕ ಗಬೆಂಗಳೂರಿನ ಪ್ರಾಕೃತಿಕ ವೈವಿಧ್ಯಕ್ಕೆ ಸಂಬಂಧಿಸಿ ಮಾಹಿತಿ ಹಂಚಿಕೊಂಡಿದ್ದಾರೆ. ಮರಗಳ ಬಗೆಗಿನ ಆಸಕ್ತಿದಾಯಕ ವಿಷಯವಾಗಿದೆ. ಬೆಂಗಳೂರು ನಗರವು ಮರಗಳು ಮತ್ತು ಕೆರೆಗಳು ಸೇರಿದಂತೆ ಪ್ರಕೃತಿಯೊಂದಿಗೆ ಬಹಳ ಗಾಢವಾದ ಬಾಂಧವ್ಯವನ್ನು ಹೊಂದಿದೆ. ತಮ್ಮ ಪಟ್ಟಣಗಳು ಮತ್ತು ನಗರಗಳ ಬಗೆಗಿನ ಇಂತಹ ಅಂಶಗಳನ್ನು ಪ್ರಚುರಪಡಿಸುವಂತೆ ನಾನು ಇತರರನ್ನು ಒತ್ತಾಯಿಸುತ್ತೇನೆ ಎಂದು ಟ್ವೀಟರ್‌ನಲ್ಲಿ ಕನ್ನಡದಲ್ಲೇ ಪ್ರಧಾನಿ ಮೋದಿ ಬರೆದುಕೊಂಡಿದ್ದಾರೆ.