ಬೆಂಗಳೂರು : ʼಪವಿತ್ರ ಮೃತ್ತಿಕೆ ಸಂಗ್ರಹʼ ಅಭಿಯಾನಕ್ಕೆ ಚಾಲನೆ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಉದ್ಘಾಟನೆ ಅಂಗವಾಗಿ ರಾಜ್ಯದ ಎಲ್ಲೆಡೆಯಿಂದ ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನದ ರಥೋತ್ಸವಕ್ಕೆ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿಂದು ಅಬಕಾರಿ ಸಚಿವ ಕೆ.
ಕಾಮಾಕ್ಷಿ ಪಾಳ್ಯದ ಆಂಜನೇಯ ಸ್ವಾಮಿ ದೇವಾಲಯದ ಆವರಣದಿಂದ ಆರಂಭಗೊಂಡ ರಥಯಾತ್ರೆ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಎಲ್ಲ 8 ವಾರ್ಡ್ ಗಳಲ್ಲಿ ಸಂಚರಿಸಿ ಮೃತ್ತಿಕೆ ಸಂಗ್ರಹಿಸಿತು.
ಈ ಸಂದರ್ಭ ಬೆಂಗಳೂರು ಉತ್ತರ ವಲಯ ಬಿಜೆಪಿ ಜಿಲ್ಲಾಧ್ಯಕ್ಷ ನಾರಾಯಣ ಗೌಡ, ಉಪಾಧ್ಯಕ್ಷ ಜಯರಾಮಯ್ಯ, ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ವಾರ್ಡ್ ಅಧ್ಯಕ್ಷ ರಂಗನಾಥ್, ಗಂಗಹನುಮಯ್ಯ, ಶಿವಾನಂದಮೂರ್ತಿ, ನಾಗರತ್ನ ಲೋಕೇಶ್ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ವಿವಿಧ ಜಾನಪದ ಕಲಾ ತಂಡಗಳು ಮೆರವಣಿಗೆಗೆ ಮೆರಗು ನೀಡಿದ್ದವು.