ಬೆಂಗಳೂರು ಬಂದಿಳಿದ ಪ್ರಧಾನಿಗೆ ಸ್ವಾಗತ ಕೋರಿದ 'ವರುಣ' : 'ಮೋದಿ' ಎಂಟ್ರಿ ವೇಳೆ ಸಿಲಿಕಾನ್ ಸಿಟಿಯಲ್ಲಿ ಜಿಟಿಜಿಟಿ ಮಳೆ

ಬೆಂಗಳೂರು ಬಂದಿಳಿದ ಪ್ರಧಾನಿಗೆ ಸ್ವಾಗತ ಕೋರಿದ 'ವರುಣ' : 'ಮೋದಿ' ಎಂಟ್ರಿ ವೇಳೆ ಸಿಲಿಕಾನ್ ಸಿಟಿಯಲ್ಲಿ ಜಿಟಿಜಿಟಿ ಮಳೆ

ಬೆಂಗಳೂರು : ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನವಾಗಿದ್ದು, ಬೆಂಗಳೂರು ಬಂದಿಳಿದ ಪ್ರಧಾನಿಗೆ ವರುಣರಾಯ ಸ್ವಾಗತ ಕೋರಿದ್ದಾನೆ.

ಪ್ರಧಾನಿ ಮೋದಿ ಬೆಂಗಳೂರು ಬಂದಿಳಿಯುತ್ತಿದ್ದಂತೆ ಬೆಳಗ್ಗೆಯೇ ಜಿಟಿಜಿಟಿ ಮಳೆ ಆರಂಭವಾಗಿದೆ.

ಮಳೆಯ ನಡುವೆಯೂ ಅಭಿಮಾನಿಗಳು ಪ್ರಧಾನಿ ಮೋದಿಯನ್ನು ನೋಡಲು ರಸ್ತೆಯ ಇಕ್ಕೆಲಗಳಲ್ಲಿ ಕಿಕ್ಕಿರಿದು ಸೇರಿದ್ದರು.

ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ಸೇನಾ ಚಾಪರ್ ನಲ್ಲಿ ಮೇಖ್ರಿ ಸರ್ಕಲ್ ನ ವಾಯುಸೇನೆಗೆ ತೆರಳಲಿರುವ ಪ್ರಧಾನಿ ಮೋದಿ ಅಲ್ಲಿಂದ ಶಾಸಕರ ಭವನದ ಕಡೆ ತೆರಳಲಿದ್ದಾರೆ. ಪ್ರಧಾನಿಗಳಿಗೆ ಸ್ವಾಗತ ಕೋರುವ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬೊಮ್ಮಾಯಿ, ಸಂಸದ ತೇಜಸ್ವಿ ಸೂರ್ಯ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಜರಿದ್ದರು.

ಇನ್ನೂ, ಇಂದು 9 ಗಂಟೆ 45 ನಿಮಿಷಕ್ಕೆ ಕನಕದಾಸ ಪ್ರತಿಮೆಗೆ ಮಾಲಾರ್ಪಣೆ ಮಾಡಲಿರುವ ಮೋದಿ 9 ಗಂಟೆ 55 ನಿಮಿಷಕ್ಕೆ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಈ ವೇಳೆ ಸಿಎಂ ಬೊಮ್ಮಾಯಿ ಸೇರಿ ಹಲವರು ರಾಜಕೀಯ ನಾಯಕರು ಉಪಸ್ಥಿತರಿರಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ( Prime Minister Narendra Modi ) ಇಂದು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಅಲ್ಲದೇ ಕೆಂಪೇಗೌಡ ವಿಮಾನ ನಿಲ್ದಾಣದ ( Kempegowda Airport ) ಬಳಿಯಲ್ಲಿನ ಕೆಂಪೇಗೌಡ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ.

ನಂತರ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿ ರಾಜ್ಯದ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ.ಬೆಂಗಳೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ನಗರದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.ನಗರದಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಮಂದಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.

ನಗರ ಪೊಲೀಸ್ ಆಯುಕ್ತ ಸಿ.ಹೆಚ್ ಪ್ರತಾಪ್ ರೆಡ್ಡಿ ಅವರೇ ಭದ್ರತೆಯ ಉಸ್ತುವಾರಿ ವಹಿಸಲಿದ್ದು, ಇವರ ಮಾರ್ಗದರ್ಶನದಲ್ಲಿ ಹೆಚ್ಚವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಸುಬ್ರಹ್ಮಣ್ಯೇಶ್ವರ ರಾವ್, ಜಂಟಿ ಪೊಲೀಸ್ ಆಯುಕ್ತ ಬಿ.ಆರ್ ರವಿಕಾಂತೇಗೌಡ , ರಮಣಗುಪ್ತ ಸೇರಿದಂತೆ ಐವರು ಡಿಸಿಪಿಗಳು ಭದ್ರತೆ ಜವಾಬ್ದಾರಿ ವಹಿಸಲಿದ್ದಾರೆ.