ಬೆಂಗಳೂರು: ಮಾ.12ರಂದು ಮಂಡ್ಯ, ಧಾರವಾಡಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ
ಬೆಂಗಳೂರು: ಮಾರ್ಚ್ 12 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಮತ್ತು ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ.
ಮಂಡ್ಯದಲ್ಲಿ ಅವರು ಮದ್ದೂರು ಕ್ಷೇತ್ರದಲ್ಲಿ ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ ಹೆದ್ದಾರಿಯನ್ನು ಉದ್ಘಾಟಿಸಲಿದ್ದಾರೆ.
ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಬಿಜೆಪಿ ಸೇರಲಿದ್ದಾರೆ ಎಂಬ ಊಹಾಪೋಹಗಳಿವೆ.
ಅವರು ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಯೋಜಿಸುತ್ತಿದ್ದಾರೆ. ಬಳಿಕ ಧಾರವಾಡಕ್ಕೆ ತೆರಳಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.